ದಸರಾ: ಸ್ವಚ್ಛತೆ, ಪರಿಸರ ಶುಚಿತ್ವಕ್ಕೆ ಒತ್ತು ನೀಡಿ

dasara sabhe
Published on

ಮಡಿಕೇರಿ: ಮಡಿಕೇರಿ ದಸರಾ ಸಂಬಂಧಿಸಿದಂತೆ ಸ್ವಚ್ಛತೆ ಹಾಗೂ ಪರಿಸರ ಶುಚಿತ್ವಕ್ಕೆ ಒತ್ತು ನೀಡಬೇಕು ಎಂದು ನಗರ ದಸರಾ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೋರಿದರು.


ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ದಸರಾ ವಿವಿಧ ಉಪ ಸಮಿತಿಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.


ಪ್ರಾಯೋಜಕತ್ವ ಬಗ್ಗೆ ಗಮನಹರಿಸಬೇಕು. ಈಗಾಗಲೇ ಯುವ ದಸರಾಗೆ ಪ್ರಸಿದ್ಧ ನಟರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಮಹಿಳಾ ದಸರಾ, ಮಕ್ಕಳ ದಸರಾ, ಜಾನಪದ ದಸರಾ, ಕಾಫಿ ದಸರಾ, ಹೀಗೆ ವಿವಿಧ ದಸರಾಗಳನ್ನು ಅಚ್ಚುಕಟ್ಟಾಗಿ ನಡೆಸಲು ಶ್ರಮಿಸುವಂತೆ ಜಿಲ್ಲಧಿಕಾರಿ ಕೋರಿದರು.
ನಾಡಿನ ಖ್ಯಾತ ಹಿನ್ನೆಲೆ ಗಾಯಕರಾದ ಅರ್ಜುನ್ ಜನ್ಯ, ರಾಜೇಶ್ ಕೃಷ್ಣ, ಶಮಿತಾ ಮಲ್ನಾಡ್ ಸೇರಿದಂತೆ ಅನೇಕ ಖ್ಯಾತ ಗಾಯಕ ರನ್ನು ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕರೆಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದು, ಪ್ರಯತ್ನಗಳು ಸಾಗಿವೆ ಎಂದು ತಿಳಿಸಿದರು.


ಜನೋತ್ಸವಕ್ಕೆ ಧಕ್ಕೆ ಬಾರದಂತೆ ಜನರ ಸಮಿತಿಯಿಂದಲೇ ಉತ್ಸವ ಸಾಂಪ್ರದಾಯಿಕವಾಗಿ ನಡೆಯುವಂತಾಗಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿಯೂ ಮಾರ್ಗದರ್ಶನ ನೀಡುತ್ತದೆ. ಪ್ರತೀ ಉಪ ಸಮಿತಿಗೂ ಸೂಕ್ತ ನಿರ್ವಹಣೆಗಾಗಿ ಅಧಿಕಾರಿಯನ್ನು ನಿಯೋಜಿಸಲಾಗುತ್ತದೆ ಎಂದರು.


ಈ ಹಿಂದಿನ ಸಂಪ್ರದಾಯದಂತೆ ಮತ್ತು ಆಚರಣೆಗಳಿಗೆ ಧಕ್ಕೆ ಬಾರದಂತೆ ವೈಭವದಿಂದ ದಸರಾವನ್ನು ಈ ಬಾರಿಯೂ ಆಚರಿಸಲಾಗುತ್ತದೆ ಎಂದರು.


ಸಭೆಯಲ್ಲಿ ವಿವಿಧ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net