ದಸರಾ ಉತ್ಸವ ಸಮಿತಿ ಪೂರ್ವಭಾವಿ ಸಭೆ

sabhe
Published on

ಸುಳ್ಯ: ಸುಳ್ಯದ ನಾಡಹಬ್ಬ 53ನೇ ವರ್ಷದ ಶ್ರೀ ಶಾರದಾಂಬ ದಸರಾ ಉತ್ಸವ ಸಮಿತಿ ಪೂರ್ವಭಾವಿ ಸಭೆ ತಾಪಂ ಸಭಾಂಗಣದಲ್ಲಿ ಜರುಗಿತು. ದಸರಾ ಉತ್ಸವದ ವಿವಿಧ ಜವಾಬ್ದಾರಿಗಳನ್ನು ಸಮಿತಿಯ ಉಪಸಮಿತಿಗಳಿಗೆ ಹಂಚಿಕೆ ಮಾಡಲಾಯಿತು. ಜತೆಗೆ ಉತ್ಸವಕ್ಕೆ ಧನ ಸಂಗ್ರಹದ ಕುರಿತಂತೆ ಚರ್ಚಿಸಲಾಯಿತು.

ಉತ್ಸವ ಸಮಿತಿ ಪದಾಧಿಕಾರಿಗಳು ಪೊಲೀಸ್ ಠಾಣೆಗೆ ಭೇಟಿ ನೀಡಿ ಎಸ್‌ಐ ಅವರಿಗೆ ಆಮಂತ್ರಣ ನೀಡಿ ದಸರಾದ ಒಂಭತ್ತು ದಿನಗಳ ಕಾಲ ಆಗಮಿಸುವ ಭಕ್ತರಿಗೆ ವಾಹನ ಪಾರ್ಕಿಂಗ್ ವ್ಯವಸ್ಥೆ, ಅಂತಿಮ ದಿನದ ಶೋಭಾಯಾತ್ರೆಯಂದು ಸೂಕ್ತ ಬಂದೋಬಸ್ತ್ ಕೈಗೊಳ್ಳುವಂತೆ ವಿನಂತಿಸಿಕೊಂಡರು.

ದಸರಾ ಉತ್ಸವ ಸಮಿತಿ ಅಧ್ಯಕ್ಷ ಡಾ.ಲೀಲಾಧರ್ ಡಿ.ವಿ., ಉತ್ಸವ ಸಮಿತಿ ಪದಾಧಿಕಾರಿಗಳು, ಶ್ರೀ ಶಾರದಾಂಬ ಸೇವಾ ಸಮಿತಿ ಗೌರವಾಧ್ಯಕ್ಷ ಗೋಕುಲ್ ದಾಸ್, ಅಧ್ಯಕ್ಷ ನಾರಾಯಣ ಕೇಕಡ್ಕ, ದಸರಾ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಗೌರವಾಧ್ಯಕ್ಷ ಕೃಷ್ಣ ಕಾಮತ್ ಅರಂಬೂರು, ಗೌರವ ಸಲಹೆಗಾರರಾದ ಎನ್.ಎ.ರಾಮಚಂದ್ರ, ಎನ್.ಜಯಪ್ರಕಾಶ್ ರೈ, ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ಮಹಿಳಾ ಸಮಿತಿ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಕೋಶಾಧಿಕಾರಿ ಅಶೋಕ್ ಪ್ರಭು, ಸಮಿತಿ ಹರೀಶ್ ಉಬರಡ್ಕ, ಸುನೀಲ್ ಕೇರ್ಪಳ, ವಿವಿಧ ಉಪಸಮಿತಿ ಪದಾಧಿಕಾರಿಗಳು, ಶ್ರೀ ಶಾರದಾಂಬ ಸಮೂಹ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net