ದತ್ತ ಮಾಲಾ ಅಭಿಯಾನ ಪೂರ್ವ ಭಾವಿ ಸಭೆ

14 ckm 8
ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಸಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ದತ್ತ ಮಾಲಾ ಅಭಿಯಾನದ ಪೂರ್ವ ಭಾವಿ ಸಭೆ ನಡೆಯಿತು. ಎಸ್‌ಪಿ ವಿಕ್ರಮ ಅಮಟೆ, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ದಲ್ಜಿತ್ ಕುಮಾರ್, ಜಿ.ಕೃಷ್ಣಮೂರ್ತಿ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ನವೆಂಬರ್ ೪ರಿಂದ ೧೦ರವರೆಗೆ ನಡೆಯಲಿರುವ ದತ್ತ ಮಾಲಾ ಅಭಿಯಾನವನ್ನು ಶಾಂತಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ದತ್ತ ಮಾಲಾ ಅಭಿಯಾನದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದತ್ತ ಪೀಠಕ್ಕೆ ದರ್ಶನಕ್ಕೆ ಹೋಗುವ ಸಮಯ ಹಾಗೂ ಬರುವ ಸಮಯವನ್ನು ತಿಳಿಸಲಾಗುವುದು. ಗಿರಿಯಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಈಗಾಗಲೇ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಸಂಬAಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.
ಕವಿಕಲ್ ಗಂಡಿ ಹತ್ತಿರ ರಸ್ತೆ ದುರಸ್ತಿಯಲ್ಲಿರುವುದರಿಂದ ಲಾಂಗ್ ಚಾರ್ಸಿ ವಾಹನಗಳು ಬರಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಮಿನಿ ಬಸ್‌ಗಳ ವ್ಯವಸ್ಥೆ ಮಾಡಲು ಆರ್ ಟಿ ಒ ಅಧಿಕಾರಿಗೆ ಸೂಚಿಸಿದ ಅವರು, ವಾಹನಗಳ ದಟ್ಟಣೆ ಉಂಟಾಗುವುದರಿAದ ಲಾಂಗ್ ಚಾರ್ಸಿ ವಾಹನಗಳನ್ನು ಬಳಸದಂತೆ ತಿಳಿಸಿದರು.
ಎಸ್‌ಪಿ ವಿಕ್ರಮ ಅಮಟೆ ಮಾತನಾಡಿ, ಬೇರೆ ಜಿಲ್ಲೆಗಳಿಂದ ದತ್ತ ಮಾಲಾಧಾರಿಗಳು ಯಾರ ನೇತೃತ್ವದಲ್ಲಿ ಬರುತ್ತಾರೆ, ಭಕ್ತಾಧಿಗಳು ಉಳಿಯುವ ಸ್ಥಳ, ಹೊರ ರಾಜ್ಯಗಳಿಂದ ಬರುವವರ ಮಾಹಿತಿಯನ್ನು ಮೊದಲೇ ಪೊಲೀಸ್ ಇಲಾಖೆಗೆ ತಿಳಿಸಬೇಕು. ಪೀಠದೊಳಗೆ ಯಾರು ಕೂಡ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ ಹಾಗೂ ಪೋಟೋ ತೆಗೆಯುವಂತಿಲ್ಲ. ಪೊಲೀಸ್ ಇಲಾಖೆಯಿಂದ ಸುರಕ್ಷತಾ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಪೊಲೀಸ್ ಇಲಾಖೆಯಿಂದ ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಳ್ಳಬೇಕು. ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಸ್ತೆಗಳ ದುರಸ್ಥಿ ಪಡಿಸಬೇಕು. ಚಿಕ್ಕಮಗಳೂರು ತಹಸೀಲ್ದಾರ್ ಕಚೇರಿ, ಅಲ್ಲಂಪುರ ಗ್ರಾಮ ಪಂಚಾಯಿತಿಯಿAದ ಅಲ್ಲಂಪುರ ಹಾಗೂ ಕೈಮರದ ಬಳಿ ಅಗತ್ಯ ಪಾರ್ಕಿಂಗ್, ತಾತ್ಕಾಲಿಕ ಶೌಚಗೃಹ ವ್ಯವಸ್ಥೆ ಮಾಡಬೇಕು. ಜವರಾಯಿ ಬಳಿ ಪೊಲೀಸ್ ಚೆಕ್ ಪೋಸ್ಟ್ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ತಾತ್ಕಾಲಿಕ ಆಸ್ಪತ್ರೆ ತೆರೆದು ಅಗತ್ಯ ವೈದ್ಯರು ಮತ್ತು ಸಿಬ್ಬಂದಿ ನೇಮಿಸಬೇಕು. ಜೊತೆಗೆ ಆಂಬುಲೆನ್ಸ್ಗಳ ವ್ಯವಸ್ಥೆ ಮಾಡಬೇಕು. ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಾಗೂ ಕೆ ಎಸ್ ಆರ್ ಟಿ ಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಅಗತ್ಯ ಬಸ್ ವ್ಯವಸ್ಥೆ, ಕ್ರೇನ್, ನಗರಸಭೆಯಿಂದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಎಚ್.ಎಸ್. ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕ ರಡ್ಡಿ, ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಎಎಸ್‌ಪಿ ಜಿ.ಕೃಷ್ಣಮೂರ್ತಿ, ತಹಸೀಲ್ದಾರ್ ಡಾ. ಸುಮಂತ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net