

ಉಳ್ಳಾಲ: ಪೊಲೀಸ್ ಇಲಾಖೆ ಅನುಮತಿ ನೀಡದಿದ್ದರೂ ಕಲ್ಲಡ್ಕ ಪ್ರಭಾಕರ್ ಭಟ್ ಬಂಧನ ಆಗ್ರಹಿಸಿ ತೊಕ್ಕೊಟ್ಟಿನಲ್ಲಿ ಪ್ರತಿಭಟನೆ ನಡೆಸಿದ ಡಿವೈಎಫ್‌ಐ ಮತ್ತು ಸಿಪಿಐಎಂ ಮುಖಂಡರ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಭಾಕರ್ ಭಟ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿ.29ರಂದು ತೊಕ್ಕೊಟ್ಟಿನಲ್ಲಿ ಡಿವೈಎಫ್‌ಐ ವತಿಯಿಂದ ಪ್ರತಿಭಟನೆ ನಡೆಸಲಾಗಿತ್ತು. ಇದಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡಿರಲಿಲ್ಲ. ಪ್ರಭಾಕರ್ ಭಟ್ ಅವರನ್ನು ಬಂಧಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನೆಯಲ್ಲಿ ಎಚ್ಚರಿಕೆ ನೀಡಲಾಗಿತ್ತು. ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿ, ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ ಎನ್ನುವ ಆರೋಪದಲ್ಲಿ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್, ಕಾರ್ಯದರ್ಶಿ ಸಂತೋಷ್ ಕುಮಾರ್ ಬಜಾಲ್, ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ರಝಾಕ್ ಮೊಂಟೆಪದವು, ರಿಝ್ವನ್ ಹರೇಕಳ, ಇಬ್ರಾಹಿಂ ಮದಕ, ಕೃಷ್ಣಪ್ಪ ಸಾಲ್ಯಾನ್, ಜಯಂತ್ ನಾಯಕ್, ಹರೇಕಳ ಗ್ರಾಪಂ ಸದಸ್ಯ ಅಶ್ರಫ್, ವಾಕರ್ ಕೋಟೆಪುರ, ನೌಫಲ್ ಕೋಟೆಪುರ, ಸಮೀರ್ ಉಳ್ಳಾಲಬೈಲ್, ಅಶ್ಫಾಕ್ ಕೋಟೆಪುರ, ಅಶ್ಫಾಕ್ ಅಲೇಕಳ, ಅಸುಂತ ಡಿಸೋಜ, ಸಿಯಾನ ಬಿ.ಎಂ. ವಿರುದ್ಧ ಪ್ರಕರಣ ದಾಖಲಿಸಲಾಗಿದೆ.