ಇ-ಆಸ್ತಿ , ಕಾವೇರಿ ತಂತ್ರಾಂಶ ಸಂಯೋಜನೆ

Published on

ಮೈಸೂರು: ನಗರಾಭಿವೃದ್ಧಿ ಇಲಾಖೆಯಿಂದ ಮೈಸೂರು ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶ ಸಂಯೋಜನೆ ಮಾಡಲಾಗುತ್ತಿದೆ.
ಇದಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜನೆ ಮಾಡಲಾಗಿದೆ. ಮೈಸೂರು ಜಿಲ್ಲಾ ವ್ಯಾಪ್ತಿಯ ಎಲ್ಲ ಉಪ ನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಲು ಅಲ್ಲದೆ ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದಲೇ ಪಡೆಯಬೇಕಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಪ್ರಕರಣೆಯಲ್ಲಿ ತಿಳಿಸಿದ್ದಾರೆ.
ಇ-ಆಸ್ತಿ ಸಂಯೋಜನೆಯಿಂದ ಸಾರ್ವಜನಿಕರು ಸ್ವತ್ತುಗಳ ನೋಂದಣಿ ವೇಳೆ ಮೋಸ ಹೋಗುವುದನ್ನು ತಡೆಯುವುದು, ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ. ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸುವುದು, ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು, ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸಬಹುದಾಗಿದೆ. ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net