

ನಾಗಮಂಗಲ: ಮಳೆಗಾಲ ಆರಂಭವಾಗುತ್ತಿದ್ದು, ಮಳೆಯ ನೀರು ಸಂಗ್ರಹವಾಗುವ ಸ್ಥಳಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವ ಮೂಲಕ ಡೆಂೆ ರೋಗ ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಮಳೆಯ ನೀರು ಸಂಗ್ರಹವಾಗದಂತೆ ಹಾಗೂ ಸೊಳ್ಳೆಗಳು ಉತ್ಪತ್ತಿಯಾಗದಂತೆ ಎಚ್ಚರವಹಿಸುವುದು ಮುಖ್ಯ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ನಾರಾಯಣ್ ಹೇಳಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿ, ಪುರಸಭೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ಪೌರಕಾರ್ಮಿಕರಿಗೆ ಈಡಿಸ್ ಲಾರ್ವಾ ನಿರ್ಮೂಲನೆ ಕುರಿತು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಡೆಂೆ ಜ್ವರದ ಕುರಿತು ಯಾವುದೇ ವ್ಯಕ್ತಿಯಾದರೂ ಸಹ ನಿರ್ಲಕ್ಷೃ ಮಾಡಿದರೆ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಮಳೆಗಾಲ ಆರಂಭವಾಗುತ್ತಿರುವುದರಿಂದ ಚರಂಡಿಗಳಲ್ಲಿ, ತೆಂಗಿನ ಚಿಪ್ಪು, ಟೈಯರ್‌ಗಳಲ್ಲಿ ಹಾಗೂ ಗಿಡದ ಪಾಟ್‌ಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕಿದೆ. ಡೆಂೆ ಜ್ವರವು ಮನುಷ್ಯನ ರೋಗ ನಿರೋಧಕ ಶಕ್ತಿಯನ್ನು ಕುಂದಿಸುವಂತೆ ಮಾಡುತ್ತದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿದರೂ ಸಹ ಹಲವಾರು ಸಂದರ್ಭದಲ್ಲಿ ರೋಗಿಯ ಪ್ರಾಣ ಹೋಗಿರುವ ನಿದರ್ಶನಗಳಿವೆ. ಆ ನಿಟ್ಟಿನಲ್ಲಿ ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ಸೊಳ್ಳೆಗಳು ಉತ್ಪತ್ತಿಯಾಗದಂತೆ, ಕಚ್ಚದಂತೆ ಕ್ರಮವಹಿಸುವ ಮೂಲಕ ಡೆಂೆ ಹರಡುವಿಕೆಯನ್ನು ನಿಯಂತ್ರಣ ಮಾಡಬೇಕಿದೆ. ಡೆಂೆ ಜ್ವರದ ಹರಡುವಿಕೆ ಮತ್ತು ನಿಯಂತ್ರಣದ ಕುರಿತು ಅರಿವು ಮೂಡಿಸುವ ಜತೆಗೆ ಸ್ವಚ್ಛತೆ ಕಾಪಾಡಲು ಕ್ರಮವಹಿಸಬೇಕು ಎಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಸಿದ್ಧಲಿಂಗಯ್ಯ ಮಾತನಾಡಿ, ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬರದಂತೆ ತಡೆಯುವುದು ಮುಖ್ಯವಾಗಿರುತ್ತದೆ. ಆ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಡೆಂೆ ನಿಯಂತ್ರಣಕ್ಕಾಗಿ ಕೈಜೋಡಿಸಿದಾಗ ಮಾತ್ರವೇ ಯಶಸ್ವಿಯಾಗಿ ರೋಗ ನಿಯಂತ್ರಣ ಮಾಡಲು ಸಾಧ್ಯವಾಗುತ್ತದೆ. ತಾಲೂಕಿನಲ್ಲಿ ಇನ್ನೂ ಡೆಂೆ ಹರಡುವಿಕೆ ಅತ್ಯಂತ ಕಡಿಮೆ ಇರುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಿದರೆ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತದೆ. ಮುಂದೆ ಮಳೆಗಾಲ ಇರುವುದರಿಂದ ಸೊಳ್ಳೆಗಳು ಹೆಚ್ಚಾಗಿ ಉತ್ಪತ್ತಿಯಾಗುವ ಸಂಭವವಿರುತ್ತದೆ. ಆದ್ದರಿಂದ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳುವ ಜತೆಗೆ ಸೊಳ್ಳೆಗಳನ್ನು ನಾಶಪಡಿಸಬೇಕಿದೆ. ನೀರು ನಿಲ್ಲುವ ಕಡೆ ಗಪ್ಪಿ ಮತ್ತು ಗ್ಯಾಂಬೇಸಿ ಮೀನುಗಳನ್ನು ಬಿಡುವ ಮೂಲಕ ಲಾರ್ವಾ ನಿಯಂತ್ರಣ ಮಾಡಲಾಗುತ್ತಿದೆ. ಡೆಂೆ ಜ್ವರದ ಬಗ್ಗೆ ಜನರು ಅಗತ್ಯ ಮಾಹಿತಿಯನ್ನು ತಿಳಿದುಕೊಂಡು ಎಚ್ಚರಿಕೆ ವಹಿಸಬೇಕು ಎಂದರು.
ಪುರಸಭೆ ಆರೋಗ್ಯ ನಿರೀಕ್ಷಣಾಧಿಕಾರಿ ನಾಗರಾಜು ಡೆಂೆ ಜ್ವರದ ಹರಡುವಿಕೆ, ಸೊಳ್ಳೆಗಳ ಉತ್ಪತ್ತಿ, ರೋಗ ಲಕ್ಷಣ, ನಿಯಂತ್ರಣ ಕ್ರಮ, ಒಣ ದಿನದ ಆಚರಣೆ, ಡೆಂೆ ಜ್ವರದ ಚಿಕಿತ್ಸೆ ಸೇರಿದಂತೆ ಹಲವು ಅಂಶಗಳನ್ನು ಕುರಿತು ಕಾರ್ಯಾಗಾರದಲ್ಲಿ ಪೌರ ಕಾರ್ಮಿಕರಿಗೆ ಮಾಹಿತಿ ನೀಡಿದರು. ನಂತರ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ಜಾಗೃತಿ ಜಾಥಾಕ್ಕೆ ತಾ.ಪಂ ಯೋಜನಾಧಿಕಾರಿ ಸಂದೀಪ್ ಚಾಲನೆ ನೀಡಿದರು.
ಕಾರ್ಯಾಗಾರದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಜ್ಯೋತಿಲಕ್ಷ್ಮೀ, ತಾ.ಪಂ ನರೇಗಾ ಸಹಾಯಕ ನಿರ್ದೇಶಕಿ ಮೇನಕಾ, ಆರೋಗ್ಯ ಇಲಾಖೆ ಆಶಾ ಕಾರ್ಯಕರ್ತೆಯರ ತಾಲೂಕು ಮೇಲ್ವಿಚಾರಕಿ ಶ್ರುತಿ, ಆರೋಗ್ಯ ನಿರೀಕ್ಷಣಾಧಿಕಾರಿ ಚಿಕ್ಕಸ್ವಾಮಿ, ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಇದ್ದರು.