

ಮಂಡ್ಯ: ಜಿಲ್ಲೆಯ ಬಿ.ಪಿ.ಎಲ್ ಮತ್ತು ಅಂತ್ಯೋದಯ ಪಡಿತರರು ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲ ಸದಸ್ಯರ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ 48,397 ಪಡಿತರ ಸದಸ್ಯರ ಇ-ಕೆವೈಸಿ ಬಾಕಿ ಇದೆ. ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಯಲ್ಲಿ ಏ.30ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳಲು ರಾಜ್ಯಸರ್ಕಾರ ಅವಕಾಶ ನೀಡಿದೆ. ಇಲ್ಲದಿದ್ದರೆ ಪಡಿತರ ಚೀಟಿಯಲ್ಲಿನ ಸದಸ್ಯರಿಗೆ ಪಡಿತರ ಹಂಚಿಕೆ ನಿಲ್ಲುವ ಸಾಧ್ಯತೆ ಇದೆ ಎಂದು ಪ್ರಕಟಣೆ ತಿಳಿಸಿದೆ.