ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಪ್ರಶಸ್ತಿ

jjjjjjjj
Published on


ಮಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಬೆಂಗಳೂರು ಇದರ 19 ನೇ ವಾರ್ಷಿಕ ಸಾಮಾನ್ಯ ಸಭೆ ಬೆಂಗಳೂರಿನಲ್ಲಿ ಮಹಾಮಂಡಳದ ಅಧ್ಯಕ್ಷೆ ಲಲಿತ ಜಿ. ಟಿ. ದೇವೇಗೌಡ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ರಾಜ್ಯದಲ್ಲಿ ಹೆಚ್ಚು ಮುದ್ರಾಂಕ ಶುಲ್ಕ ಪಡೆದು ಹಾಗೂ ಇ-ಸ್ಟಾಂಪಿಂಗ್ ಪ್ರತಿಗಳನ್ನು ಮುದ್ರಿಸಿ ಮಾರಾಟ ಮಾಡಿರುವ ಸಹಕಾರ ಸಂಘಗಳ ಮುಖ್ಯಸ್ಥರನ್ನು ಸನ್ಮಾನಿಸಲಾಯಿತು
2022-23ನೇ ಸಾಲಿನಲ್ಲಿ ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅತಿ ಹೆಚ್ಚು ಮೊತ್ತದ ಇ ಸ್ಟಾಂಪಿಂಗ್ ಮುದ್ರಿಸಿರುವ ಸಂಘ ಎಂಬ ಪ್ರಶಂಸಾ ಫಲಕ ಪಡೆಯಿತು. ಸಂಘದ ಅಧ್ಯಕ್ಷ ಹಾಗೂ ಮಹಾಮಂಡಳದ ನಿರ್ದೇಶಕ
ಚಿತ್ತರಂಜನ್ ಬೋಳಾರ್ ಅವರು ಲಲಿತ ಜಿ. ಟಿ. ದೇವೇಗೌಡ ಇವರಿಂದ ಪ್ರಶಸ್ತಿ ಸ್ವೀಕರಿಸಿದರು. ಮಹಾಮಂಡಳದ ಉಪಾಧ್ಯಕ್ಷ
ಕೆ.ಕೆ ಮಹೇಂದ್ರ ಪ್ರಸಾದ್ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಶಾಲತಾ.ಪಿ. ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net