

ಹೆಬ್ರಿ: ಮಕ್ಕಳಿಗೆ ಬಾಲ್ಯದಲ್ಲಿ ಸಿಗುವ ಆರಂಭಿಕ ಶಿಕ್ಷಣವು ಗುಣಮಟ್ಟದಿಂದ ಕೂಡಿದ್ದರೆ ಮುಂದೆ ಉನ್ನತ ಶಿಕ್ಷಣಕ್ಕೆ ಬುನಾದಿಯಾಗುತ್ತದೆ. ಆರಂಭಿಕ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕಾದದ್ದು ಪ್ರತಿಯೊಬ್ಬ ಪಾಲಕರ ಆದ್ಯ ಕರ್ತವ್ಯ. ಈ ದಿಸೆಯಲ್ಲಿ ನಮ್ಮ ಶಿಕ್ಷಣ ಸಂಸ್ಥೆ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ ಎಂದು ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಚ್.ನಾಗರಾಜ್ ಶೆಟ್ಟಿ ಹೇಳಿದರು.
ಎಸ್.ಆರ್.ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ಎಲ್ಕೆಜಿ ಮಕ್ಕಳ ತರಗತಿ ಆರಂಭೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸಪ್ನಾ ಎನ್.ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳನ್ನು ಸ್ವತಂತ್ರವಾಗಿ ಬೆಳೆಯಲು ಪಾಲಕರು ಪ್ರೋತ್ಸಾಹಿಸಬೇಕು. ಮಕ್ಕಳ ಮನಸ್ಸು ಅರಳುವ ಸಮಯದಲ್ಲಿ ಮಕ್ಕಳ ಮನಸ್ಸಿನ ಮೇಲೆ ನಿಯಂತ್ರಣ ಹೇರಬಾರದು. ಸ್ವತಂತ್ರವಾಗಿ ಬದುಕಲು ಬಾಲ್ಯದಿಂದಲೇ ಅಭ್ಯಾಸ ವಾಡಿಸಬೇಕು ಎಂದರು.
ಪ್ರಾಂಶುಪಾಲೆ ಭಗವತಿ, ಉಪ ಪ್ರಾಂಶುಪಾಲ ದೀಪಕ್ ಎನ್., ಎಸ್.ಆರ್.ಆಂಗ್ಲ ವಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಗೋಪಾಲ ಆಚಾರ್ಯ, ಕೋ-ಆರ್ಡಿನೇಟರ್ ಸುಜಾತಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಿಶಾ ನಿರೂಪಿಸಿ, ಸ್ವಾಗತಿಸಿದರು. ಶಿಕ್ಷಕಿ ಸುಜಾತಾ ವಂದಿಸಿದರು.