

ಹುಬ್ಬಳ್ಳಿ : ಇಲ್ಲಿನ ಗೋಕುಲ ರಸ್ತೆ ಕೈಗಾರಿಕಾ ವಸಾಹತುವಿನಲ್ಲಿನ ಸಮಸ್ಯೆಗಳನ್ನು ಬಗೆಹರಿಸಿ, ಮೂಲ ಸೌಲಭ್ಯ ಒದಗಿಸುವುದಾಗಿ ಶಾಸಕ ಮಹೇಶ ಟೆಂಗಿನಕಾಯಿ ಭರವಸೆ ನೀಡಿದ್ದಾರೆ.
ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಉದ್ದಿಮೆ ಸಂಘದ ಸಭೆಯಲ್ಲಿ ಶನಿವಾರ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಕೈಗಾರಿಕಾ ವಸಾಹತುವಿನಲ್ಲಿ ನಿತ್ಯ ಕಸ ಸಂಗ್ರಹಕ್ಕೆ ಪಾಲಿಕೆಯಿಂದ ಆಟೋಟಿಪ್ಪರ ನೀಡಲಾಗಿದೆ. ಸ್ಮಾರ್ಟ್ಸಿಟಿ ಯೋಜನೆ ಅಡಿ 18 ಕೋಟಿ ರೂ. ಅನುದಾನದಲ್ಲಿ ರಸ್ತೆಗಳನ್ನು ನಿರ್ವಿುಸಿದ್ದು, ಪೇವರ್ಸ್ ಅಳವಡಿಸಲಾಗುತ್ತಿದೆ. ಎಲ್ ಆಂಡ್ ಟಿ ಮತ್ತು ಕೆಯುಡಿಐ ಅಧಿಕಾರಿಗಳೊಂದಿಗೆ ರ್ಚಚಿಸಿ, ನೀರಿನ ಸಮಸ್ಯೆ ಪರಿಹರಿಸಲು ಸೂಚಿಸಲಾಗಿದೆ. ಬೀದಿ ದೀಪಗಳ ನಿರ್ವಹಣೆಗೆ ಪಾಲಿಕೆಗೆ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ಹೆಸ್ಕಾಂಗೆ ಸೂಚನೆ ನೀಡಲಾಗಿದೆ ಎಂದರು.
ಈ ಪ್ರದೇಶದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗಾಗಿ 37 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲಾಗಿದೆ. ಎರಡ್ಮೂರು ತಿಂಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು.
ಇದಕ್ಕೂ ಮೊದಲು ಮಾತನಾಡಿದ ಸಂಘದ ಅಧ್ಯಕ್ಷ ರಮೇಶ ಪಾಟೀಲ, ಕಳೆದ 40 ವರ್ಷಗಳಿಂದ ಇಂಡಿಯನ್ ಇಂಡಸ್ಟ್ರಿಯಲ್ ಎಸ್ಟೇಟ್ನಲ್ಲಿ ಯಾವುದೇ ಯಾವುದೆ ಅಭಿವೃದ್ಧಿ ಆಗಿಲ್ಲ. ಪ್ರತಿ ವರ್ಷ ತೆರಿಗೆ ಪಾವತಿಸುತ್ತಿದ್ದರೂ, ಅಗತ್ಯ ಸೌಲಭ್ಯಗಳಿಂದ ವಂಚಿತರಾಗಿದ್ದಾಗಿ ಎಂದು ದೊರಿದರು.
ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಮಾತನಾಡಿ, ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾದ ವಸಾಹತುಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಎರಡೂ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಹಂತ ಹಂತವಾಗಿ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಹೇಳಿದರು.
ಉದ್ಯಮಿದಾರರಾದ ಅಶೋಕ ಕುನ್ನೂರ, ವಿಶ್ವನಾಥ ಅಂಗಡಕಿ ಹಾಗೂ ವಿರೂಪಾಕ್ಷಪ್ಪ ತೊಟಪಲ್ ಮಾತನಾಡಿದರು. ಸಂಘದ ಪದಾಧಿಕಾರಿಗಳಾದ ಸಂದೀಪ ಬಿಡಸಾರಿಯಾ, ವಿಜಯ ಸೈಗಲ್, ನಾಗೇಶ ರಿತ್ತಿ , ಪ್ರಶಾಂತ ಆಡೂರ್ಕರ, ಶ್ರೀಪತಿ ಭಟ್, ಮಹಾಂತೇಶ ಬತ್ಲಿ ಹಾಗೂ ಇತರರು ಉಪಸಿತರಿದ್ದರು.