

ಬೆಳಗಾವಿ : ನೆರೆಯ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಲಘ ಭೂಕಂಪ ಸಂಭವಿಸಿದ್ದು, ಬುಧವಾರ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಇಂದು(ಬುಧವಾರ) ಬೆಳಗ್ಗೆ 6.45ಕ್ಕೆ ಕೊಲ್ಲಾಪುರದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದ್ದು, 5 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ.
ಯಾವುದೇ ಸಾವು- ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎನ್ಸಿಎಸ್ ಮಾಹಿತಿ ನೀಡಿದೆ.