ನೆರೆಯ ಕೊಲ್ಲಾಪುರದಲ್ಲಿ ಭೂಕಂಪ ; ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು

Screenshot_2023_0816_111731.png
Published on

ಬೆಳಗಾವಿ : ನೆರೆಯ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಲಘ ಭೂಕಂಪ ಸಂಭವಿಸಿದ್ದು,  ಬುಧವಾರ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ  ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಇಂದು(ಬುಧವಾರ) ಬೆಳಗ್ಗೆ 6.45ಕ್ಕೆ ಕೊಲ್ಲಾಪುರದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದ್ದು, 5 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ.
ಯಾವುದೇ ಸಾವು- ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎನ್‌ಸಿಎಸ್ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net