ಕಬ್ಬಿಣಾಂಶಯುಕ್ತ ಆಹಾರ ಸೇವಿಸಿ

ಕಾತರಕಿ-ಗುಡ್ಲಾನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಬೆಟಗೇರಿಯಿಂದ ಆಯೋಜಿಸಿದ್ದ ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಮರದಾನಬೀ ಬಳಿಗಾರ ಮಾತನಾಡಿದರು. ಪ್ರಾಚಾರ್ಯೆ ವಿಶಾಲಾಕ್ಷಿ, ವೈದ್ಯಾಧಿಕಾರಿ ಕಾವ್ಯಾ, ಉಪನ್ಯಾಸಕರಾದ ಪೂರ್ಣಿಮಾ, ಎ.ಗದ್ರಯ್ಯ, ಕೃಷ್ಣ, ಬೀರಪ್ಪ, ಇತರರಿದ್ದರು.

Published on

ಅಳವಂಡಿ: ರಕ್ತಹೀನತೆ ನಿರ್ಲಕ್ಷಿಸಿದರೆ ಅನೇಕ ಆರೋಗ್ಯ ಸಂಬಂಧಿ ಕಾಯಿಲೆಗಳು ಬರುತ್ತವೆ. ಹಾಗೂ ಮಕ್ಕಳ ಶಾರೀರಿಕ, ಮಾನಸಿಕ ಬೆಳವಣಿಗೆ ಕುಂಠಿವಾಗುತ್ತದೆ ಎಂದು ಸಮುದಾಯ ಆರೋಗ್ಯ ಅಧಿಕಾರಿ ಮರದಾನಬೀ ಬಳಿಗಾರ ಹೇಳಿದರು.

ಸಮೀಪದ ಕಾತರಕಿ-ಗುಡ್ಲಾನೂರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಬೆಟಗೇರಿ, ಉಪಕೇಂದ್ರ ಕಾತರಕಿಯಿಂದ ನಡೆದ ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು.

ತರಕಾರಿ, ಮೊಳಕೆ ಕಾಳು, ಸೊಪ್ಪು ಹಾಗೂ ಕಬ್ಬಿಣಾಂಶ ಹೆಚ್ಚಿರುವ ಆಹಾರ ಪದಾರ್ಥಗಳನ್ನು ಸೇವಿಸಬೇಕು ಇದರಿಂದ ರಕ್ತಹೀನತೆ ತಡೆಗಟ್ಟಬಹುದು. ವಿದ್ಯಾರ್ಥಿಗಳು ಆರೋಗ್ಯ ಇಲಾಖೆ ನಡೆಸುವ ರಕ್ತಹೀನತೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಇದು ಅಪೌಷ್ಟಿಕತೆ ಗುರುತಿಸಲು ಸಹಕಾರಿಯಾಗುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net