ಪೌಷ್ಟಿಕ ಆಹಾರ ಸೇವಿಸಿ ಅಪೌಷ್ಟಿಕತೆ ದೂರವಾಗಿಸಿ

nrp 1.. (1)
Published on

ಎನ್.ಆರ್.ಪುರ: ಪೌಷ್ಟಿಕ ಆಹಾರ ಸೇವಿಸಿ ಅಪೌಷ್ಟಿಕತೆಯನ್ನು ದೂರವಾಗಿಸ ಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಟಿ.ರಘುನಾಥ್‌ಗೌಡ ಹೇಳಿದರು.

ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ, ಆರೋಗ್ಯ ಇಲಾಖೆ, ರೋಟರಿ ಕ್ಲಬ್‌ನ ಅಶ್ರಯದಲ್ಲಿ ನಡೆದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜನರು ಜಂಗ್‌ುಡ್‌ಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಸಾರ್ವಜನಿಕರಿಗೆ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತಿದೆ. ಹಳೇ ಆಹಾರ ಪದ್ಧತಿಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಅಪೌಷ್ಟಿಕತೆ ತಡೆಗಟ್ಟಲು ಎಲ್ಲರೂ ಶ್ರಮಿಸಬೇಕು ಎಂದರು.

ಭ್ರೂಣದಲ್ಲಿರುವ ಮಗುವಿನಿಂದ ಹಿಡಿದು ಎಲ್ಲರಿಗೂ ಕಾನೂನಿನ ರಕ್ಷಣೆ ಇದೆ. ಕಾನೂನಿನ ಅರಿವನ್ನು ಎಲ್ಲರೂ ಪಡೆದುಕೊಳ್ಳಬೇಕು. ಬಾಲ್ಯ ವಿವಾಹ ಹದಿಹರೆಯದ ಗರ್ಭಧಾರಣೆ, ಅತ್ಯಾಚಾರ ಪ್ರಕರಣಗಳು ಮರುಕಳಿಸಿದಂತೆ ಎಲ್ಲರೂ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಕೆ.ಓ.ನರಸಿಂಹಮೂರ್ತಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿ, ಸೆ.1ರಿಂದ 7ರವರೆಗೆ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದ ಮೂಲಕ ಪೌಷ್ಟಿಕ ಆಹಾರದ ಮಹತ್ವ ತಿಳಿಸುವುದು, ಪೌಷ್ಟಿಕತೆ ದೂರವಾಗಿಸಲು ಕಾರ್ಯಕ್ರಮಗಳನ್ನು ರೂಪಿಸುವುದು, ಸಾರ್ವಜನಿಕರಲ್ಲಿ ಆಹಾರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ನಾವು ಮೈದಾ ಸಕ್ಕರೆ ಅಂಶಗಳನ್ನು ಕಡಿಮೆ ಸೇವಿಸಿ ನೈಸರ್ಗಿಕವಾದ ಹಸಿರು ಸೊಪ್ಪು, ತರಕಾರಿ, ಹಣ್ಣು, ಏಕದಳ ಮತ್ತು ದ್ವಿದಳ ಧಾನ್ಯಗಳನ್ನು ಸೇವಿಸಬೇಕು. ಗರ್ಭಿಣಿಯರು ಬಾಣಂತಿಯರು ಹದಿ ಹರೆಯದ ಮಕ್ಕಳು ವಯಸ್ಕರು ಅಪೌಷ್ಟಿಕತೆಗೆ ತುತ್ತಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದರು.

ರೋಟರಿ ಸಂಸ್ಥೆ ಅಧ್ಯಕ್ಷ ಕಣಿವೆ ವಿನಯ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಜಯಪ್ರಕಾಶ್, ಸಹಾಯಕ ಸರ್ಕಾರಿ ಅಭಿಯೋಜಕ ಗದಿಗೆಪ್ಪನೇಕಾರ್, ಡಾ.ಸುಧಾ, ಡಾ.ಪ್ರಭು, ಡಾ.ಲಿಂಗರಾಜ್, ಡಾ.ಶ್ರೀನಿವಾಸ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ, ಲೋಕೇಶ್, ಕಾರ್ತಿಕೇಯನ್, ಡೈಸಿ, ಶೈನಿ, ನಾಗಲತಾ, ಶಿಲ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net