ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ
Published on

ಅರಕಲಗೂಡು: ಪೌಷ್ಟಿಕಾಂಶವುಳ್ಳ ಆಹಾರ ಸೇವಿಸುವುದರ ಮೂಲಕ ಆರೋಗ್ಯ ವೃದ್ಧಿಸಿಕೊಳ್ಳಬೇಕು ಎಂದು ಅರಕಲಗೂಡು ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ವಿಭಾಗದ ಆಪ್ತ ಸಮಾಲೋಚಕ ಪರಶುರಾಮ್ ಶಿರೂರ ಹೇಳಿದರು.

ತಾಲೂಕಿನ ವಿಜಾಪುರ ಅರಣ್ಯ ಗ್ರಾಮದಲ್ಲಿ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ವಿಭಾಗ ಹಾಗೂ ಚೈತನ್ಯ ಸಂಘದ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರದಲ್ಲಿ ಮಾತನಾಡಿದರು.

ಸರ್ಕಾರದಿಂದ ಸಿಗುವ ಉಚಿತ ಆರೋಗ್ಯ ಸೌಲಭ್ಯಗಳನ್ನು ಜನರು ಬಳಸಿಕೊಳ್ಳಬೇಕು. ಇತ್ತೀಚೆಗೆ ಕೆಲ ಗ್ರಾಮಗಳಲ್ಲಿ ಡೆಂೆ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಸಾರ್ವಜನಿಕರು ಎಚ್ಚರ ವಹಿಸಬೇಕು. ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಶಿಬಿರದಲ್ಲಿ ಮಧುಮೇಹ, ರಕ್ತದ ಒತ್ತಡ, ಎಚ್‌ಐವಿ, ಕ್ಷಯ ರೋಗ ಪರೀಕ್ಷೆ ನಡೆಸಲಾಯಿತು.

ಗ್ರಾಪಂ ಪಿಡಿಒ ರಾಜೇಗೌಡ ಶಿಬಿರ ಉದ್ಘಾಟಿಸಿದರು. ಮಲ್ಲಿಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಲೋಕೇಶ್, ಐಸಿಟಿಸಿ ಪ್ರಯೋಗಶಾಲಾ ತಂತ್ರಜ್ಞರಾದ ಗೌರಮ್ಮ, ಎನ್‌ಸಿಡಿ ವಿಭಾಗದ ಆಪ್ತ ಸಮಾಲೋಚಕ ಉಮೇಶ್, ಶುಶ್ರೂಷಕರಾದ ಲಲಿತಾ, ಹಾಸನದ ಚೈತನ್ಯ ಸಂಘದ ಕ್ಷೇತ್ರ ಕಾರ್ಯಕರ್ತ ಚಂದ್ರಶೇಖರ್, ಆಶಾ ಕಾರ್ಯಕರ್ತೆಯರು, ಪಂಚಾಯಿತಿ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net