ಪೌಷ್ಠಿಕ ಆಹಾರ ಸೇವನೆಯಿಂದ ಆರೋಗ್ಯ ಉತ್ತಮ

TKE 4 (CDPO)
Published on

ತರೀಕೆರೆ: ಪೌಷ್ಠಿಕ ಆಹಾರ ಸೇವನೆಯಿಂದ ಆರೋಗ್ಯ ಉತ್ತಮಗೊಳ್ಳಲಿದೆ ಎಂದು ಜೆಎಂಎ್ಸಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಊರ್ಮಿಳಾ ಹೇಳಿದರು.

ಪಟ್ಟಣದ ಸೀಶಕ್ತಿ ಭವನದಲ್ಲಿ ಜಿಪಂ, ತಾಪಂ, ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿನಿತ್ಯದ ಆಹಾರ ಕ್ರಮ ಶಿಸ್ತುಬದ್ಧವಾಗಿರಬೇಕು. ತರಕಾರಿ, ಬೇಳೆ, ಕಾಳುಗಳ ಬಳಕೆ ಆರೋಗ್ಯ ಸಧೃಡತೆಗೆ ಸಹಕಾರಿಯಾಗಲಿದೆ. ಅತಿಯಾದ ತೂಕದಿಂದ ಎದುರಾಗುವ ದುಷ್ಪರಿಣಾಮ ಕುರಿತು ಎಚ್ಚರಿಕೆ ವಹಿಸಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪೌಷ್ಠಿಕ ಆಹಾರದ ಮಹತ್ವವನ್ನು ಪ್ರತಿಯೊಬ್ಬರಿಗೂ ತಿಳಿಸಬೇಕು. ಈ ಮೂಲಕ ಸುಪೋಷಿತ್ ಭಾರತ ನಿರ್ಮಾಣದತ್ತ ದಿಟ್ಟ ಹೆಜ್ಜೆ ಇಡಬೇಕು ಎಂದರು.

ಆರೋಗ್ಯ ಶಿಕ್ಷಣಾಧಿಕಾರಿ ಜಿ.ಶಿವಪ್ಪ ಮಾತನಾಡಿ, ಸಿರಿಧಾನ್ಯ ಸೇವನೆಯಿಂದ ಮಧುಮೇಹ, ರಕ್ತದೊತ್ತಡ ನಿಯಂತ್ರಿಸಬಹುದು ಎಂದರು. ಸಿಡಿಪಿಒ ಎನ್.ಚರಣ್‌ರಾಜ್, ಶಿಕ್ಷಣ ಇಲಾಖೆ ಅಧಿಕಾರಿ ಗಿರೀಶ್, ಪೋಷಣ್ ಅಭಿಯಾನದ ಸಂಯೋಜಕಿ ಮಂಜುಳಾ, ಮೇಲ್ವಿಚಾರಕಿ ಜಿ.ಆರ್.ಭಾಗ್ಯ, ಕೆ.ಟಿ.ರೂಪ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net