ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆ ದೂರ

nrp doct
ಎನ್.ಆರ್.ಪುರ ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವ ಪೌಷ್ಟಿಕಾಂಶ ದಿನಾಚರಣೆ ಕಾರ್ಯಕ್ರಮವನ್ನು ಕಿರಿಯ ಸಿವಿಲ್ ನ್ಯಾಯಾಧೀಶ ದಾಸರಿ ಕ್ರಾಂತಿಕಿರಣ್ ಉದ್ಘಾಟಿಸಿದರು. ಎಚ್.ಎ.ಸಾಜು, ಗದಿಗಪ್ಪ ನೇಕಾರ್, ಡಾ. ವಿಜಯಕುಮಾರ್, ಡಾ. ಚಂದ್ರಪ್ರಭಾ, ಬಿಂದು ವಿಜಯ್, ನೀತಾ ಪ್ರದೀಪ್ ಇತರರಿದ್ದರು.
Published on

ಎನ್.ಆರ್.ಪುರ: ಮಕ್ಕಳು, ಗರ್ಭಿಣಿಯರು ಮತ್ತು ಮಹಿಳೆಯರಲ್ಲಿ ಪೋಷಕಾಂಶಗಳ ಕೊರತೆಯಿಂದ ಅಪೌಷ್ಟಿಕತೆ ಮತ್ತು ರಕ್ತಹೀನತೆ ಹೆಚ್ಚಾಗುತ್ತಿದೆ. ಸರ್ಕಾರಗಳು ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದರೂ ಅಪೌಷ್ಟಿಕತೆ ನಿವಾರಣೆಯಲ್ಲಿ ಹಿನ್ನಡೆಯಾಗುತ್ತಿದೆ. ಈ ನಿಟ್ಟಿನಲ್ಲಿ ಪೌಷ್ಟಿಕ ಆಹಾರ ಸೇವಿಸಬೇಕು. ಸ್ಥಳೀಯವಾಗಿ ಸಿಗುವ ಆಹಾರ ಪದಾರ್ಥಗಳನ್ನು ಸೇವಿಸಿ ಆರೋಗ್ಯ ಉತ್ತಮವಾಗಿರಿಸಿಕೊಳ್ಳಬೇಕು ಎಂದು ಕಿರಿಯ ಸಿವಿಲ್ ನ್ಯಾಯಾಧೀಶ ದಾಸರಿ ಕ್ರಾಂತಿಕಿರಣ್ ಹೇಳಿದರು.

ತಾಲೂಕು ಕಾನೂನು ಸೇವಾ ಸಮಿತಿಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ವಿಶ್ವ ಪೌಷ್ಟಿಕಾಂಶ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಆರೋಗ್ಯ ಇಲಾಖೆ ಸಿಬ್ಬಂದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಮನೆ, ಮನೆಗೆ ಪೌಷ್ಟಿಕ ಆಹಾರದ ಅಗತ್ಯದ ಮಾಹಿತಿ ನೀಡಬೇಕು. ತಾಲೂಕು ಕಾನೂನು ಸೇವಾ ಸಮಿತಿಯ ಸೌಲಭ್ಯವನ್ನು ಎಲ್ಲರೂ ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ವಿಜಯಕುಮಾರ್ ಮಾತನಾಡಿ, ಆಹಾರದಲ್ಲಿ ಪೋಷಕಾಂಶಗಳಾದ ಕಾರ್ಬೋಹೈಡ್ರೇಡ್, ಪ್ರೋಟೀನ್, ವಿಟಮಿನ್, ಮಿನರಲ್, ನಾರು ಮತ್ತು ನೀರಿರುವ ಆಹಾರ ಪದಾರ್ಥಗಳನ್ನು ಸೇವಿಸಬೇಕು ಎಂದರು.
ಸಹಾಯಕ ಸರ್ಕಾರಿ ಅಭಿಯೋಜಕ ಗದಿಗಪ್ಪನೇಕಾರ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಚ್.ಎ.ಸಾಜು, ಬಿಂದು ವಿಜಯ್, ಡಾ. ವೀರಪ್ರಸಾದ್, ಡಾ. ಚಂದ್ರಪ್ರಭಾ, ಡಾ. ಶ್ರೀರಂಜಿನಿ, ನೀತಾ ಪ್ರದೀಪ್, ಅಕ್ಷತಾ ರಜತ್, ಪಿ.ಪಿ.ಬೇಬಿ, ಡೀಸಯ, ಪೂರ್ಣಾವತಿ, ನಾಗಲತಾ, ಚೈತ್ರಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net