ಕೇಂದ್ರದ ನಿಧಿಯಿಂದ ಆರ್ಥಿಕ ಬೆಳವಣಿಗೆ ಸಾಧ್ಯ

21 SRT
Published on

ಶಿರಹಟ್ಟಿ: ಕೇಂದ್ರ ರಸ್ತೆ ನಿಧಿ ಯೋಜನೆ ಭಾರತದಲ್ಲಿ ರಸ್ತೆ ಸೌಕರ್ಯ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಮುಖ ಯೋಜನೆಯಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ದೇಶದಾದ್ಯಂತ ಸುಗಮ ಸಂಚಾರ ವ್ಯವಸ್ಥೆ ನಿರ್ಮಿಸುವುದಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ತಾಲೂಕಿನ ತೊಳಲಿ ಗ್ರಾಮದಲ್ಲಿ ಮಂಗಳವಾರ ಕೇಂದ್ರ ರಸ್ತೆ ನಿಧಿ ಯೋಜನೆಯ (ಸಿಆರ್‌ಐಎಫ್) 6 ಕೋಟಿ ರೂ. ವೆಚ್ಚದಲ್ಲಿ ಗಜೇಂದ್ರಗಡ- ಸೊರಬ ರಾಜ್ಯ ಹೆದ್ದಾರಿ ಸುಧಾರಣೆಗೆ ಚಾಲನೆ ನೀಡಿ ಮಾತನಾಡಿ, ಯೋಜನೆಯಡಿ, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ವಿಸ್ತರಿಸುವುದು, ಅವುಗಳ ಗುಣಮಟ್ಟವನ್ನು ಸುಧಾರಿಸುವುದು ಮತ್ತು ಹೊಸ ಹೆದ್ದಾರಿಗಳನ್ನು ನಿರ್ಮಿಸುವುದು ಸೇರಿ ಹಲವಾರು ಕಾಮಗಾರಿಗಳು ನಡೆಯುತ್ತಿವೆ. ರಾಜ್ಯ ಹೆದ್ದಾರಿಗಳನ್ನು ಸುಧಾರಿಸುವ ಮೂಲಕ ಗ್ರಾಮೀಣ ಪ್ರದೇಶಗಳನ್ನು ಮುಖ್ಯವಾಹಿನಿಗೆ ಸಂಪರ್ಕಿಸುವುದು ಯೋಜನೆಯ ಇನ್ನೊಂದು ಗುರಿಯಾಗಿದೆ ಎಂದರು

ಗ್ರಾಮ ಪಂಚಾಯಿತಿ ಅಧ್ಯಕ್ಷ ಫಕೀರಪ್ಪ ನರಸಮ್ಮನವರ, ಶಿವನಗೌಡ ಕಂಠೀಗೌಡ್ರು, ಸದಸ್ಯರಾದ ಹೇಮಕ್ಕ ಹಿರೇಮಠ, ನಿಂಗಪ್ಪ ನಾಯಕ, ಮಹೇಶ ತೆಗ್ಗಿನಮನಿ, ಚೆನ್ನವೀರಗೌಡ ತೆಗ್ಗಿನಮನಿ, ವೀರೇಶ ತಂಗೋಡ, ಸಂತೋಷ ಹಿರೇಮಠ, ವಿಶ್ವನಾಥ ಪಾಟೀಲ, ಪ್ರಶಾಂತ ಹೊಸಮನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net