ಸ್ವಸಹಾಯ ಸಂಘಗಳ ಮೂಲಕ ಆರ್ಥಿಕ ಸ್ವಾವಲಂಬನೆ

odp
Published on

ಮಡಿಕೇರಿ: ಮಹಿಳೆಯರು ಸ್ವಸಹಾಯ ಸಂಘಗಳ ಮೂಲಕ ಬ್ಯಾಂಕಿನ ವ್ಯವಹಾರ ಕಲಿತುಕೊಂಡು ಆರ್ಥಿಕ ಸ್ವಾವಲಂಬನೆ ಹೊಂದುತ್ತಿದ್ದಾರೆ ಎಂದು ನಿವೃತ್ತ ಪ್ರಾಂಶುಪಾಲರಾದ ಶ್ಯಾಮಲ ಅಭಿಪ್ರಾಯ ವ್ಯಕ್ತಪಡಿಸಿದರು.


ನಗರದ ಮಡಿಕೇರಿ ಬಸಪ್ಪ ಶಿಶುವಿಹಾರದಲ್ಲಿ ಒಡಿಪಿ ಸಂಸ್ಥೆ, ಮಹಿಳೋದಯ ಮಹಿಳಾ ಒಕ್ಕೂಟ(ರಿ), ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಮಹಿಳೆಯದರು ಸಮಾಜದ ಅವಿಭಾಜ್ಯ ಅಂಗ. ಹೆಣ್ಣು ಮಕ್ಕಳು ಎಲ್ಲಾ ರೀತಿಯ ಶಕ್ತಿ ಸಾಮಾರ್ಥ್ಯ ಹೊಂದಿದ್ದು, ಕೊಡಗು ಜಿಲ್ಲೆಯಲ್ಲಿಯೂ ಮಹಿಳೆಯರು ಸಾಕಷ್ಟು ಸಾಧನೆ ಮಾಡಿದ್ದಾರೆ. ಆತ್ಮವಿಶ್ವಾಸದಿಂದ ಮಹಿಳೆಯರು ಸಮಾಜದ ಮುಖ್ಯ ವಾಹಿನಿಗೆ ಬರುತ್ತಿರುವುದು ಸಂತೋಷದ ವಿಷಯ ಎಂದರು.


ಒಡಿಪಿ ಸಂಸ್ಥೆಯ ಜಿಲ್ಲಾ ವಲಯ ಸಂಯೋಜಕಿ ಜಾಯ್ಸ ಮೆನೆಜಸ್ ಮಾತನಾಡಿದರು. ಒಡಿಪಿ ಕಾರ್ಯಕರ್ತೆ ಬೇಬಿ ಪೂವಯ್ಯ, ಸಮೃದ್ಧಿ ಕೇಂದ್ರ ಸಮಿತಿ ಅಧ್ಯಕ್ಷೆ ರಕ್ಷಿತಾ, ಮಹಿಳೋದಯ ಮಹಿಳಾ ಒಕ್ಕೂಟದ ಮೇರಿ, ಲೂಸಿ ಜೇಮ್ಸ್, ಶೋಭ ಮತ್ತಿತರರು ಈ ಸಂದರ್ಭ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net