ಸ್ವ ಸಹಾಯ ಗುಂಪುಗಳಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆ

26 Shashi 02
Published on

ಮಾನ್ವಿ: ಗ್ರಾಮೀಣ ಭಾಗದ ಸ್ವ ಸಹಾಯ ಗುಂಪುಗಳಿಗೆ ಗ್ರಾ.ಪಂನಿಂದ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಮುಂದಾಗಬೇಕು ಎಂದು ತಾಪಂ ಇಒ ಖಾಲೀದ್ ಅಹ್ಮದ್ ಹೇಳಿದರು.

ಪಟ್ಟಣದ ಶಾಸಕರ ಭವನದಲ್ಲಿ ಸಮುದಾಯ ಆಧಾರಿತ ಸಂಸ್ಥೆಗಳ ಒಗ್ಗೂಡಿಸುವಿಕೆ ಕುರಿತ ತರಬೇತಿ ಕಾರ್ಯಗಾರ ಉದ್ಘಾಟಿಸಿ ಬುಧವಾರ ಮಾತನಾಡಿದರು. ಗ್ರಾಮೀಣ ಭಾಗಗಳ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರದಿಂದ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸ್ವಯಂ ಸೇವಾ ಸಂಸ್ಥೆಗಳು ಮತ್ತು ಇತರ ಇಲಾಖೆಯಿಂದ ರಚಿಸಲ್ಪಟ್ಟ ಸ್ವ ಸಹಾಯ ಗುಂಪುಗಳು ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸಲು ಸಹಕಾರಿಯಾಗಿವೆ ಎಂದರು.

ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಸ್ವ ಸಹಾಯ ಗುಂಪಿನ ಮಹಿಳೆಯರಿಗೆ ಸಮರ್ಪಕ ಮಾಹಿತಿಯನ್ನು ನೀಡಿ, ಮಹಿಳೆಯರು ಆರ್ಥಿಕವಾಗಿ ಸಬಲರಾಗುವಂತೆ ಮಾಡಲು ಕಾರ್ಯ ನಿರ್ವಹಿಸಬೇಕು ಎಂದರು. ವ್ಯವಸ್ಥಾಪಕ ಖಾಸಿಂ, ವಲಯ ಮೇಲ್ವಿಚಾರಕ ಸೂರತ್ ಪ್ರಸಾದ್ ಗಟ್ಟು, ಪ್ರಮುಖರಾದ ಶರಣಬಸವ, ರುದ್ರಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net