ಕೃಷಿಯೇತರ ಚಟುವಟಿಕೆಯಿಂದ ಆರ್ಥಿಕ ಸದೃಢತೆ

17M.D.R.7
ಮದ್ದೂರು ತಾಲೂಕಿನ ವಳಗೆರೆಹಳ್ಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜಅನೆ ವತಿಯಿಂದ ಮೈಸೂರಿನ ಮಾನವ ಸಂಪನ್ಮೂಲ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮದಡಿ ಸದಸ್ಯರಿಗೆ ಆಯೋಜಿಸಿದ್ದ ಪೇಪರ್ ಬ್ಯಾಗ್ ಮತ್ತು ಬಟ್ಟೆ ಬ್ಯಾಗ್ ತಯಾರಿ ತರಬೇತಿಯ ಸಮಾರೋಪ ಸಮಾರಂಭವನ್ನು ಮಾನವ ಸಂಪನ್ಮೂಲ ತರಬೇತಿ ಕೇಂದ್ರದ ಪ್ರಾಂಶುಪಾಲ ದಿನೇಶ್ ಉದ್ಘಾಟಿಸಿದರು. ಯೋಗೀಶ್, ಜಯರಾಮ್, ಶ್ವೇತ, ತೇಜಾವತಿ, ಸುಮಾ, ಯಶೋಧ ಇದ್ದರು.
Published on

ಮದ್ದೂರು: ತಾಲೂಕಿನ ವಳಗೆರೆಹಳ್ಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇತ್ತೀಚೆಗೆ ಮೈಸೂರಿನ ಮಾನವ ಸಂಪನ್ಮೂಲ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮದಡಿ ಸದಸ್ಯರಿಗೆ ಯೋಜಿಸಿದ್ದ ಪೇಪರ್ ಬ್ಯಾಗ್ ಮತ್ತು ಬಟ್ಟೆ ಬ್ಯಾಗ್ ತಯಾರಿಕೆ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಅಯೋಜಿಸಲಾಗಿತ್ತು.


ಮಾನವ ಸಂಪನ್ಮೂಲ ತರಬೇತಿ ಕೇಂದ್ರದ ಪ್ರಾಂಶುಪಾಲ ದಿನೇಶ್ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕೃಷಿಯೊಂದಿಗೆ ಕೃಷಿಯೇತರ ಚಟುವಟಿಕೆಗಳು ಕೈಗೊಂಡರೆ ಆರ್ಥಿಕವಾಗಿ ಸದೃಢತೆ ಸಾಧಿಸಬಹುದು. ಉದ್ಯೋಗವಿಲ್ಲ ಎಂಬ ಜನರಿಗೆ ಸ್ವಉದ್ಯೋಗದಲ್ಲಿ ಆಸಕ್ತಿ ಇದ್ದರೆ ಉದ್ಯೋಗಕ್ಕಿಂತ ಸ್ವ ಉದ್ಯೋಗವೇ ಮೇಲು ಎಂದ ಅವರು, ಹಳ್ಳಿಯಲ್ಲಿಯೇ ತಾವು ಬೆಳೆದ ಹಣ್ಣು, ಹೂ, ತರಕಾರಿಗಳನ್ನು ಮಾರುವುದರಿಂದ ಅಧಿಕ ಲಾಭಗಳಿಸಬಹುದು ಎಂದರು. ತರಬೇತಿ ಪಡೆದ ಅಭ್ಯರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಪ್ರಮಾಣ ಪತ್ರ ಸ್ವೀಕರಿಸಿದರು.

ಸಂಘದ ತಾಲೂಕು ಯೋಜನಾಧಿಕಾರಿ ಯೋಗೀಶ್, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜಯರಾಮ್, ತರಬೇತಿ ಸಂಸ್ಥೆಯ ಉಪನ್ಯಾಸಕಿ ಶ್ವೇತಾ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ತೇಜಾವತಿ, ವಲಯ ಮೇಲ್ವಿಚಾರಕಿ ಸುಮಾ, ತರಬೇತಿ ಶಿಕ್ಷಕಿ ಯಶೋಧ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net