ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

38df5ff1-a51c-4a65-8f29-b1deb0c31c14
Published on


ಚಾಮರಾಜನಗರ: ಜಾರಿ ನಿರ್ದೇಶನಾಲಯ ವಿಚಾರಣೆ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ  ಉದ್ದೇಶಪೂರ್ವಕವಾಗಿ ಕಿರುಕುಳ ನೀಡಲಾಗುತ್ತದೆ ಎಂದು ಆರೋಪಿಸಿ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ  ಪ್ರತಿಭಟನೆಯನ್ನು ನಡೆಸಲಾಯಿತು.


ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಾಜಿ ಸಚಿವ ಹಾಗೂ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ  ಚೆಲುವನಾರಾಯಣಸ್ವಾಮಿ, ಜಿಲ್ಲಾ ಕಾಂಗ್ರೆಸ್ ಜಿಲ್ಲಾ ಪಿ.ಮರಿಸ್ವಾಮಿ ನೇತೃತ್ವದಲ್ಲಿ ಸಮಾವೇಶಗೊಂಡ  ಕಾಂಗ್ರೆಸ್ ಕಾರ್ಯಕರ್ತರು ಹಾಗು ಮುಖಂಡರು  ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ಮಾನವ ಸರಪಳಿ ನಿರ್ಮಿಸಿ  ರಸ್ತೆತಡೆ ನಡೆಸಿ ಕೇಂದ್ರ ಸರ್ಕಾರ, ನರೇಂದ್ರ ಮೋದಿ, ಅಮಿತ್ ಶಾ ವಿರುದ್ದ  ಘೋಷಣೆ ಕೂಗಿ  ಆಕ್ರೋಶ ವ್ಯಕ್ತಪಡಿಸಿದರು.


ಬಳಿಕ ಬಿ.ರಾಚಯ್ಯ ಜೋಡಿ ರಸ್ತೆ ಮಾರ್ಗ ಜಿಲ್ಲಾಡಳಿತ ಭವನಕ್ಕೆ ತೆರಳಿ ಮುಖ್ಯ ಧ್ವಾರದ ಮುಂದೆ ಧರಣಿ ನಡೆಸಿ, ಸ್ಥಳಗಕ್ಕಾಮಿಸಿದ   ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಅವರ  ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಮಾಜಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿ, ಬಿಜೆಪಿ ಸರ್ಕಾರ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ವಿರೋಧ ಪಕ್ಷಗಳ ಧ್ವನಿ ಅಡಗಿಸಲು ಸ್ವಯಂ ಸಂಸ್ಥೆಗಳಾದ  ಐಟಿ, ಇಡಿ, ಸಿಬಿಐ ಸಂಸ್ಥೆಗಳನ್ನು ಧ್ವೇಷದ ರಾಜಕಾರಣ ಮಾಡುತ್ತಿದೆ. ಪ್ರಧಾನಿ ನರೇಂದ್ರ ಕಳೆದ 8 ವರ್ಷಗಳ ಅವಧಿಯಲ್ಲಿ ದೇಶವನ್ನು ಹಾಳಾ ಮಾಡುತ್ತಿದ್ದು,  ಬೆಲೆ ಏರಿಕೆ, ನೋಟ್ ಬ್ಯಾನ್, ಕಪ್ಪು ಹಣ ವಾಪಸ್  ತರುವಲ್ಲಿ ವಿಫಲ,  ಸಾಮಾನ್ಯ ಹಾಗು ಬಡವರ ಮೇಲೆ  ಜಿಎಸ್‌ಟಿ ತೆರಿಗಳನ್ನು ವಿಧಿಸಿ, ಜನರ ಆಕ್ರೋಶಕ್ಕೆ  ಒಳಗಾಗಿದೆ ಎಂದರು.


ಶಾಸಕ ಸಿ.ಪುಟ್ಟರಂಗಶೆಟ್ಟಿ, ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ,  ಕೆಪಿಸಿಸಿ  ಪ್ರಧಾನ ಕಾರ್ಯದರ್ಶಿ  ಮಂಜುಳ ಮಾನಸ,ಮಾಜಿ ಸಂಸದ ಕಾಗಲವಾಡಿ ಎಂ.ಶಿವಣ್ಣ,  ಮಾಜಿ ಶಾಸಕರಾದ ಎಸ್.ಜಯಣ್ಣ, ಎಸ್.ಬಾಲರಾಜ್, ಯುವ ಮುಖಂಡ ಗಣೇಶ್ ಪ್ರಸಾದ್, ಜಿಲ್ಲಾ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ  ಆರ್.ಮಹದೇವು, ಚಿಕ್ಕಮಹದೇವು, ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆರೆಹಳ್ಳಿ ನವೀನ್, ಜಿಲ್ಲಾ ಮಹಿಳಾ ಅಧ್ಯಕ್ಷೆ ಲತಾ ರಾಜಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುರುಸ್ವಾಮಿ, ಮಹಮ್ಮದ್ ಅಸ್ಗರ್, ತೋಟೇಶ್ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net