ಮಹಾವಂಚಕ ಯುವರಾಜನ ಬೆನ್ನುಹತ್ತಿದ ಇಡಿ, ಐಟಿ

yuvaraja arrest
Published on

ಬೆಂಗಳೂರು : ಬಿಜೆಪಿ, ಆರ್‌ಎಸ್‌ಎಸ್ ಹೆಸರು ಹೇಳಿಕೊಂಡು ವಂಚಿಸುತ್ತಿದ್ದ ಯುವರಾಜನನ್ನು ಸಿಸಿಬಿ ಬಳಿಕ ಈಗ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಶುರು ಮಾಡಿವೆ.

ಕೇಂದ್ರ ಮತ್ತು ರಾಜ್ಯ ಮಟ್ಟದ ಬಿಜೆಪಿ ನಾಯಕರ ಜತೆ ಆಪ್ತ ಸ್ನೇಹವಿದೆ ಎಂದು ಹೇಳಿಕೊಂಡು ಯುವರಾಜ, ಹಲವು ಜನರಿಗೆ ಸರ್ಕಾರಿ ಉದ್ಯೋಗ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಾಗೂ ಟೆಂಡರ್ ಕೊಡಿಸುವುದಾಗಿ ಕೋಟ್ಯಂತರ ರೂ. ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ.

ಯುವರಾಜನ ವಂಚನೆ ಜಾಲ ವಿಸ್ತಾರವಾಗುತ್ತಿದ್ದು, ಪ್ರತಿ ದಿನ ಒಂದಿಲ್ಲೊಂದು ದೂರುಗಳು ಬರುತ್ತಿವೆ. ಇದರ ನಡುವೆ ಐಟಿ ಮತ್ತು ಇಡಿ ಅಧಿಕಾರಿಗಳು, ಸಿಸಿಬಿ ತನಿಖಾಧಿಕಾರಿಗಳನ್ನು ಭೇಟಿ ಮಾಡಿ ಪ್ರಕರಣದ ಬಗ್ಗೆ ವಿವರ ಪಡೆದಿದ್ದಾರೆ. ಸಿಸಿಬಿ ತನಿಖೆ ಮುಗಿದ ಬಳಿಕ ಯುವರಾಜನನ್ನು ಐಟಿ ಮತ್ತು ಇಡಿ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ. ಅಕ್ರಮ ಹಣ ವರ್ಗಾವಣೆ ಸಂಬಂಧ ಇಡಿ, ಐಟಿ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net