ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ‌ ಇಡಿ ದಾಳಿ! ED raids ​

ED raids ​
Published on

ED raids : ಗೃಹ ಸಚಿವ ಡಾ. ಜಿ. ಪರಮೇಶ್ವರ್​ ಅವರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು (ಮೇ 21) ಬೆಳಗ್ಗೆ ಶಾಕ್ ನೀಡಿದ್ದಾರೆ. ಅವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ‌ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ್ ಮೆಡಿಕಲ್ ಕಾಲೇಜು, ಎಸ್ ಎಸ್ ಐಟಿ ಕಾಲೇಜು ಸೇರಿದಂತೆ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ, ನೆಲಮಂಗಲದ ಟಿ.ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ದಾಳಿಯಾಗಿದೆ.

ಇಂದು ಬೆಳಗ್ಗೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮೂರು ಕಾರುಗಳಲ್ಲಿ ಬಂದ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಎಸ್ಎಸ್ಐಟಿ ಕಾಲೇಜಿನಲ್ಲಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಇದೇ ವೇಳೆ, ಮಾಧ್ಯಮ ಪ್ರತಿನಿಧಿಗಳು ಕಾಲೇಜು ಆವರಣದ ಒಳಗೆ ಬಾರದಂತೆ ಡಿವೈಎಸ್​​ಪಿ ತಾಕೀತು ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net