

ಕಾರವಾರ: ಶಾಸಕ ಎಂಸಿಎ ಅಧ್ಯಕ್ಷ ಸತೀಶ ಸೈಲ್ ಮನೆಯ ಮೇಲೆ ಇಡಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ಇಡಿ ಏಳು ಅಧಿಕಾರಿಗಳು ಸದಾಶಿವಗಡ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ಸೈಲ್ ಮನೆಯಲ್ಲಿ ತಪಾಸಣೆ ಕೈಗೊಂಡಿದ್ದಾರೆ.
ಇಬ್ಬರು ಸಿಐಎಸ್ ಎಫ್ ಅಧಿಕಾರಿಗಳನ್ನು ಮನೆಯ ಹೊರಗೆ ನಿಯೋಜಿಸಲಾಗಿದೆ.
ಅಕ್ರಮ ಅದಿರು ಪ್ರಕರಣದಲ್ಲಿ ಸತೀಶ ಸೈಲ್ ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಹೈಕೋರ್ಟ್ ಅದಕ್ಕೆ ತಡೆ ನೀಡಿದ್ದು, ಸದ್ಯ ಸೈಲ್ ರಿಲೀಫ್ ಆಗಿದ್ದಾರೆ. ಈಗ ಹೊಸ ಸವಾಲು ಎದುರಾಗಿದೆ.