

ಬದಿಯಡ್ಕ: ಕೇರಳ ರಾಜ್ಯ ಅರಣ್ಯ ಇಲಾಖೆ ಸಚಿವ ಶಶೀಂದ್ರನ್ ಅವರು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳನ್ನು ಕೊಲ್ಲೂರಿನಲ್ಲಿ ಭೇಟಿ ಮಾಡಿ ಅನುಗ್ರಹ ಮಂತ್ರಾಕ್ಷತೆ ಪಡೆದರು.
ಜು.10ರಂದು ಶ್ರೀಗಳು ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ತೊಡಗಿಕೊಳ್ಳುವ ನಿಟ್ಟಿನಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ಮಂಗಳವಾರ ಭೇಟಿ ನೀಡಿ ದೇವರ ದರ್ಶನಕ್ಕೆ ತೆರಳಿದ್ದ ಸಂದರ್ಭ ಸಚಿವರು ಶ್ರೀಗಳನ್ನು ಭೇಟಿಯಾದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರದ ವತಿಯಿಂದ ಶ್ರೀಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡರು. ಶ್ರೀಗಳೊಂದಿಗೆ ಹಿರಿಯ ವಕೀಲ ಎಂ.ನಾರಾಯಣ ಭಟ್, ಶ್ರೀಮಠದ ವ್ಯವಸ್ಥಾಪಕ ರಾಜೇಂದ್ರ ಕಲ್ಲೂರಾಯ ಇದ್ದರು.