278 ಭಕ್ತರಿಂದ ಎಡೆಸ್ನಾನ

Sub_Edesnana
Published on

ಶನಿವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ 278 ಭಕ್ತರು ಎಡೆಸ್ನಾನ ಸೇವೆಗೈದರು. ಗೋವು ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳು ಸೇವೆ ನಡೆಸುವ ಮೂಲಕ ಚಂಪಾಷಷ್ಠಿಯ ಜಾತ್ರೋತ್ಸವದ ಷಷ್ಠಿಯ ದಿನದಂದು ಎಡೆಸ್ನಾನ ಹರಕೆ ಸೇವೆ ಸಲ್ಲಿಸಿದರು.

162 ಪುರುಷರು ಮತ್ತು 102 ಮಹಿಳೆಯರು ಹಾಗೂ 14 ಮಕ್ಕಳು ಸೇವೆ ನೆರವೇರಿಸಿದರು. ಚಂಪಾಷಷ್ಠಿ ಜಾತ್ರೋತ್ಸವದ ಚೌತಿ, ಪಂಚಮಿ ಮತ್ತು ಷಷ್ಠಿಯ ದಿನ ಭಕ್ತರು ಸ್ವಯಂಪ್ರೇರಿತರಾಗಿ ಎಡೆಸ್ನಾನ ಸೇವೆ ಸಲ್ಲಿಸಿದ್ದರು. ಧಾರ್ಮಿಕ ದತ್ತಿ ಇಲಾಖೆಯ ವೈಖಾನಸಾಗಮ ಪಂಡಿತ ಡಾ.ರಾಜಗೋಪಾಲ್ ಅವರು ಎಡೆಸ್ನಾನದ ಕುರಿತು ಮಾರ್ಗದರ್ಶನ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net