

ಧಾರವಾಡ ಶಿಕ್ಷಣದಲ್ಲಿ ಬದಲಾವಣೆಯಾಗುತ್ತಿರುವ ಸಂದರ್ಭದಲ್ಲಿ ಕಾಲಕ್ಕೆ ತಕ್ಕಂತೆ ಶಿಕ್ಷಕರು ಕೂಡ ಮಾರ್ಪಾಡು ಮಾಡಿಕೊಳ್ಳುವ ಅವಶ್ಯಕತೆ ಇದೆ. ಶಿಕ್ಷಕ ವೃತ್ತಿ ವಾಣಿಜ್ಯ ವೃತ್ತಿಯಲ್ಲ, ಗೌರವಾನ್ವಿತ ವೃತ್ತಿಯಾಗಿದೆ ಎಂದು ರಾಷ್ಟಿçÃಯ ಸ್ವಯಂ ಸೇವಕ ಸಂಘದ ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಶ್ರೀಧರ ನಾಡಿಗೇರ ಹೇಳಿದರು.
ರಾಷ್ಟೋçತ್ಥಾನ ಪರಿಷತ್ ವತಿಯಿಂದ ನಗರದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಶಿಕ್ಷಕರಿಗಾಗಿ ಸೋಮವಾರ ಆಯೋಜಿಸಿದ್ದ ಶೈಕ್ಷಣಿಕ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಬದಲಾವಣೆಗಳಾಗುತ್ತಿವೆ. ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದ ದೂರದೃಷ್ಟಿಯಿಂದ ತಮ್ಮನ್ನು ಬದಲಾಯಿಸಿಕೊಳ್ಳುವುದು ಅನಿವಾರ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಮÁಜಿ ಮೇಯರ್ ಈರೇಶ ಅಂಚಟಗೇರಿ ಮÁತನಾಡಿ, ಪರಿಷತ್‌ನಿಂದ ಶಿಕ್ಷಕರಿಗಾಗಿ ಶೈಕ್ಷಣಿಕ ಶಿಬಿರ ಆಯೋಜಿಸಿರುವುದು ಶ್ಲಾಘನೀಯ. ಶೈಕ್ಷಣಿಕ ಬದಲಾವಣೆ ಹಾಗೂ ರಾಷ್ಟಿçÃಯ ಶಿಕ್ಷಣ ನೀತಿಯಿಂದ ಆಗುವ ಬದಲಾವಣೆಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಶಿಕ್ಷಕರು ಶ್ರಮಿಸಬೇಕು ಎಂದರು.
ಜಗದೀಶ ಮಳಗಿ, ಬಸವರಾಜ ತಾಳಿಕೋಟಿ, ಜಿ.ಜಿ. ಹಿರೇಮಠ, ಎಸ್. ರಾಧಾಕೃಷ್ಣ, ಪ್ರಾಚಾರ್ಯೆ ಸುರೇಖಾ ಚಾಂದಗುಡೆ, ವೀಣಾ ತುಪ್ಪದ, ವಿಜಯಲಕ್ಷಿ÷್ಮÃ ಹಾದಿಮನಿ ಹಾಗೂ ಸಿಬ್ಬಂದಿ ಇದ್ದರು.