ಏ.೧೪ರಂದು ಎಡ್ಮ್ಯಾರ್‌೧ ಆಚರಣೆ

N.U.NACHAPPA
Published on

ಮಡಿಕೇರಿ: ಕೊಡವರ ಹೊಸ ವರ್ಷಾಚರಣೆ ಎಡ್ಮ್ಯಾರ್ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಏ.೧೪ ರಂದು ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಸಂತ ಋತು ಫೆ.೧೫ ರಿಂದ ಆರಂಭಗೊಂಡು ಏ.೧೪ಕ್ಕೆ ಕೊನೆಗೊಳ್ಳುವ ಎಡ್ಮ್ಯಾರ್ ೧ನ್ನು ಸಿಎನ್‌ಸಿ ಸಂಘಟನೆ ಪ್ರತಿವರ್ಷ ಸಾರ್ವತ್ರಿಕವಾಗಿ ಆಚರಿಸಿಕೊಂಡು ಬರುತ್ತಿದ್ದು, ಇದು ೩೦ನೇ ವರ್ಷದ ಕಾರ್ಯಕ್ರಮವಾಗಿದೆ. ಏ.೧೪ ರಂದು ಸಂಜೆ ೬.೩೦ಗಂಟೆಗೆ ಗೋಣಿಕೊಪ್ಪಲಿನ ಆರ್‌ಎಂಸಿ ಯಾರ್ಡ್ ಬಳಿಯಿಂದ ದುಡಿಕೊಟ್ಟ್ ಪಾಟ್‌ನೊಂದಿಗೆ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಂಜಿನ ಮೆರವಣಿಗೆ ಸಾಗಿ ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ಕೊನೆಗೊಳ್ಳಲಿದೆ. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗ ಕೊಡವರ ಹಕ್ಕುಗಳ ಕುರಿತು ಕಾರ್ಯಕ್ರಮದಲ್ಲಿ ಪ್ರತಿಪಾದನೆ ಮಾಡುವ ಮೂಲಕ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯಲಾಗುವುದು. ರಾಜ್ಯಾಂಗದತ್ತ ಹಕ್ಕೊತ್ತಾಯಗಳನ್ನು ಪ್ರಚುರಪಡಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಗುವುದು ಎಂದು ತಿಳಿಸಿದ್ದಾರೆ.

ಇದಕ್ಕೂ ಮೊದಲು ಏ.೧೩ ಭಾನುವಾರದಂದು ಬೆಳಿಗ್ಗೆ ೭ ಗಂಟೆಗೆ ಮಡಿಕೇರಿ ತಾಲ್ಲೂಕಿನ ಬೆಂಗ್ ನಾಡಿನ ಬೆಟ್ಟತ್ತೂರು ಗ್ರಾಮದಲ್ಲಿ ಕೂಪದಿರ ಒಕ್ಕದ ಮೋಹನ್ ಅವರ ಭೂಮಿಯಲ್ಲಿ ಜೋಡೆತ್ತುಗಳ ಮೂಲಕ ಸಿಎನ್‌ಸಿ ಅಧ್ಯಕ್ಷ ಎನ್‌ಯು ನಾಚಪ್ಪ ಕೊಡವ ಉಳುಮೆ ಮಾಡುವ ಮೂಲಕ ಎಡ್ಮ್ಯಾರ್ ಆಚರಣೆಗೆ ಚಾಲನೆ ನೀಡಲಾಗುವುದು. ಕೊಡವ ಶಾಸ್ತದ ಪ್ರಕಾರ ಸೋಮವಾರದಂದು ಗೋವುಗಳನ್ನು ಉಳುಮೆಗೆ ಬಳಸುವುದು ನಿಷಿದ್ಧ ಮತ್ತು ಧರ್ಮ ಬಾಹಿರವಾಗಿದೆ. ಈ ವರ್ಷ ಅಂದರೆ ೨೦೨೫ನೇ ಇಸವಿಯಲ್ಲಿ ಸೋಮವಾರದಂದು ಎಡ್ಮ್ಯಾರ್ -೧ ಬರುವುದರಿಂದ ಅಂದು ಗೋವುಗಳ ಮೂಲಕ ಗದ್ದೆ ಉಳುಮೆ ಮಾಡಲಾಗುವುದಿಲ್ಲ. ಆದ್ದರಿಂದ ಕೊಡವ ಶಾಸ್ತದ ಪ್ರಕಾರದ ಗದ್ದೆ ಉಳುಮೆ ಕಾರ್ಯವನ್ನು ಜೊಡೆತ್ತುಗಳ ಮೂಲಕ ಏ.೧೩ ೨೦೨೫ರ ಭಾನುವಾರದಂದು ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net