ದ್ವಿತೀಯ ಪಿಯುಸಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಸಜ್ಜು

IMG_20250228_233622.jpg
Published on

ಚಿಕ್ಕಬಳ್ಳಾಪುರ: ಮಾ.1 ರಿಂದ ದ್ವೀತಿಯ ಪಿಯು ಪರೀಕ್ಷೆ ನಡೆಯಲಿದ್ದು ಇದಕ್ಕಾಗಿ ಜಿಲ್ಲೆಯಲ್ಲಿ 23 ಪರೀಕ್ಷೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ 13,819 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈಗಾಗಲೇ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಪದವಿಪೂರ್ವ ಶಿಣ ಇಲಾಖೆಯು ಅಗತ್ಯ ಸಿದ್ಧತೆ ಕೈಗೊಂಡಿದೆ.
ಮಾ.1 ರಿಂದ ಆರಂಭವಾಗಲಿರುವ ಪರೀೆಗೆ( ಮಾ.1 ರಿಂದ ಮಾ.20 ರವರೆಗೆ) ಜಿಲ್ಲೆಯಲ್ಲಿ 23 ಕೇಂದ್ರ ಗುರುತಿಸಲಾಗಿದೆ. ಪ್ರತಿಯೊಂದು ಕಡೆ ಕರ್ನಾಟಕ ಸೆಕ್ಯೂರ್ಡ್ ಎಕ್ಸಾಮಿನೇಷನ್ ಸಿಸ್ಟಮ್ನಡಿ ಸಿಸಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಹಾಗೆಯೇ ಜಿಲ್ಲಾಡಳಿತ ಭವನದಲ್ಲಿ ಆನ್ ಲೈನ್ನಲ್ಲಿ ವೀಕ್ಷಿಸುವ ವ್ಯವಸ್ಥೆ ಇದೆ.
ಪರೀಕ್ಷೆಯಲ್ಲಿ ಅಕ್ರಮಗಳನ್ನು ತಡೆಯಲು ಜಿಲ್ಲಾ ಮತ್ತು ತಾಲೂಕು ಮಟ್ಟದ ಜಾಗೃತ ದಳದ ತಂಡ ರಚಿಸಲಾಗಿದೆ. ಆಯಾ ತಾಲೂಕು ವ್ಯಾಪ್ತಿಯಲ್ಲಿ ತಹಸೀಲ್ದಾರ್, ಬಿಇಒ, ಹಿರಿಯ ಪಾಚಾರ್ಯಗಳನ್ನೊಳಗೊಂಡ 6 ಮಾರ್ಗಾಧಿಕಾರಿಗಳ ತಂಡಗಳು ಕಾರ್ಯ ನಿರ್ವಹಿಸಲಿದ್ದು ನಿಗದಿತ ಸ್ಥಳದಿಂದ ಸಂಬಂಧಪಟ್ಟ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ರವಾನೆಯಾಗಲಿದೆ. ಹಾಗೆಯೇ ಪರೀಕ್ಷೆ ಮುಗಿದ ಬಳಿಕ ಉತ್ತರ ಪತ್ರಿಕೆಗಳನ್ನು ಸಂಗ್ರಹಿಸಿ, ಸುಭದ್ರತೆಯಲ್ಲಿ ನಿಗದಿತ ಸ್ಥಳಕ್ಕೆ ಸಾಗಿಸಲಾಗುತ್ತದೆ.
ಪರೀಕ್ಷೆಯ ನಿರ್ವಹಣೆ
ಈಗಾಗಲೇ ಹೆಚ್ಚುವರಿ ಜಿಲ್ಲಾಧಿಕಾರಿ ಡಾ ಎನ್.ಭಾಸ್ಕರ್ ನೇತೃತ್ವದಲ್ಲಿ ಪರೀಾ ಪೂರ್ವ ಸಿದ್ಧತಾ ಸಭೆಯನ್ನು ಕೈಗೊಂಡು ಚರ್ಚಿಸಿದ್ದು ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಹಾಗೆಯೇ ವಿದ್ಯಾರ್ಥಿಗಳಿಗೆ ಪ್ರವೇಶಪತ್ರವನ್ನು ವಿತರಿಸಿ, ಮಾರ್ಗಸೂಚಿ ನಿಯಮಗಳನ್ನು ತಿಳಿಸಲಾಗಿದೆ. ಪರೀಾ ಕೇಂದ್ರದಲ್ಲಿ (ಪರೀಕ್ಷೆ ನಡೆಯುವ ದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ) 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಸುತ್ತಲು ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net