ಭಾಷಣಗಳಿಗೆ ಸೀಮಿತರಾಗದಿರಿ

PRABHU
Published on

ಯಾದಗಿರಿ: ಶಿಕ್ಷಣ ಇಲಾಖೆ ಮುಖ್ಯಸ್ಥರು ಕೇವಲ ಭಾಷಣಗಳಿಗೆ ಸೀಮಿತರಾಗದೆ, ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಸಲಹೆ ನೀಡಿದರು.

ಬುಧವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿ ವೈಯ್ಯಕ್ತಿಕವಾಗಿ ನಗದು ಬಹುಮಾನ ವಿತರಿಸಿ ಮಾತನಾಡಿದ ಅವರು, ನಮ್ಮ ಸಕರ್ಾರದಲ್ಲಿ ಅನುದಾನಕ್ಕೆ ಯಾವುದೇ ಕೊರತೆಯಿಲ್ಲ. ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಶೇ.6 ವೃದ್ಧಿಯಾಗಿರುವುದು ಆಶಾದಾಯಕ ಬೆಳವಣಿಗೆಯಲ್ಲ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಜಿಲ್ಲೆಯ ಎಲ್ಲ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟ ಹೆಚ್ಚಿಸುವ ಕೆಲಸ ಮಾಡಬೇಕು ಎಂದರು.

ದೇಶಾದ್ಯಂತ ಇನ್ಮುಂದೆ ನೂತನ ಶಿಕ್ಷಣ ನೀತಿ ಜಾರಿಗೆ ಬರಲಿದ್ದು, ಇಲ್ಲಿ ಶಿಕ್ಷಣ ಇಲಾಖೆ ಅಧಿಕಾರಿ, ಸಿಬ್ಬಂದಿ ಇಚ್ಛಾಶಕ್ತಿ ಅತಿ ಪ್ರಬಲವಾಗಿದ್ದಲ್ಲಿ ಆ ನೀತಿ ಅತ್ಯಂತ ಉಪಯುಕ್ತವಾಗಿ ಅನುಷ್ಠಾನಗೊಳ್ಳಲಿದೆ. ಜಿಲ್ಲೆಯ ಶಿಕ್ಷಕರು ಶಾಲೆ ಆರಂಭಕ್ಕೂ 1 ಗಂಟೆ ಮುನ್ನ ಹಾಗೂ ಶಾಲೆ ಮುಕ್ತಾಯಗೊಂಡ ಒಂದು ಗಂಟೆ ನಂತರ ಮಕ್ಕಳಿಗೆ ಹೆಚ್ಚಿನ ಅವಧಿ ಬೋಧಿಸುವ ಪ್ರವೃತ್ತಿ ಬೆಳೆಸಿಕೊಂಡಲ್ಲಿ ಅನುಕೂಲವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಶಿಕ್ಷಕರು ಗ್ರಾಮ ಸಂಚಾರ ಮಾಡುವುದರ ಜತೆಗೆ ವಿದ್ಯಾರ್ಥಿ ಪಾಲಕರ ಸಭೆ ಮಾಡಬೇಕು. ಮುಂದಿನ ದಿನಗಳಲ್ಲಿ ಶೈಕ್ಷಣಿಕ ಫಲಿತಾಂಶ ಹೆಚ್ಚಳಕ್ಕೆ ಬೇಕಾದ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಲಾಗುವುದು. ಅಭಿವೃದ್ಧಿ ಸಂಕಲ್ಪಕ್ಕೆ ಶಿಕ್ಷಣದ ಪ್ರಗತಿಯೇ ಮೂಲ. ಹೀಗಾಗಿ ಶಿಕ್ಷಕರು ಮೌಲ್ಯಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಶಾಸಕ ವೆಂಕಟರಡ್ಡಿ ಮುದ್ನಾಳ್ ಮಾತನಾಡಿ, ಜಿಲ್ಲೆ ದ್ವಿತೀಯ ಪಿಯುಸಿ ಫಲಿತಾಂಶ ಅಲ್ಪ ತೃಪ್ತಿ ತಂದಿದೆ. ಕೋವಿಡ್-19 ಸೋಂಕಿನಿಂದಾಗಿ ಶಾಲೆಗಳು ಮುಚ್ಚಿದ್ದರೂ ವಿದ್ಯಾರ್ಥಿಗಳು ಸ್ವಯಂ ಅಧ್ಯಯನ ಮಾಡಿ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದಾರೆ. 625ಕ್ಕೆ 620 ಅಂಕ ಪಡೆದಿರುವುದು ಗಣನೀಯ ಸಾಧನೆ. ಪೋಷಕರು ತಮ್ಮ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಬೇಕು ಎಂದರು.

ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, ಕೋವಿಡ್-19 ಹಿನ್ನೆಲೆಯಲ್ಲಿಯೂ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯೆ ಅಳಿದು ಹೋಗದ ಸಂಪತ್ತು. ಇಂತಹ ಸಂಪತ್ತನ್ನು ವಿದ್ಯಾಥರ್ಿಗಳು ಸಂಪಾದಿಸಬೇಕು. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರು ಪ್ರಯತ್ನಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಎಂ. ಕೂಮರ್ಾರಾವ್ ಮಾತನಾಡಿ, ಜಿಲ್ಲೆಯಿಂದ ಬೆಂಗಳೂರಿಗೆ ವಲಸೆ ಹೋದ ಕಾಮರ್ಿಕನ ಮಗ ಮಹೇಶ ಎಸ್ಸೆಸ್ಸೆಲ್ಸಿಯಲ್ಲಿ 625ಕ್ಕೆ 616 ಅಂಕ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಇಂತಹ ಪ್ರತಿಭೆಗಳಿಗೆ ಕಡಿಮೆ ಇಲ್ಲ. ವಿದ್ಯಾಥರ್ಿಗಳು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು ಎಂದು ಮನೋಬಲ ಹೆಚ್ಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಪ್ರೊಬೇಷನರಿ ಐಎಎಸ್ ಅಧಿಕಾರಿ ಅಶ್ವಿಜಾ, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಜಿಪಂ ಉಪ ಕಾರ್ಯದಶರ್ಿ ಮುಕ್ಕಣ್ಣ ಕರಿಗಾರ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ ಇದ್ದರು. ಡಿಡಿ ಪಿಯು ಚಂದ್ರಕಾಂತ ಹಿಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕ ಮನೋಹರ ಎಸ್.ಎನ್. ನಿರೂಪಣೆ ಮಾಡಿದರು. ಡಿಡಿಪಿಐ ಶ್ರೀನಿವಾಸರೆಡ್ಡಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net