ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವೆ

3
ಲಖನಾಪುರ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕಿ ಶಶಿಕಲಾ ಜೊಲ್ಲೆ, ಮಹಾದೇವಿ ನಾಯಿಕ, ವಿ.ಎ. ಭಂಡಾರಕರ, ಅಪ್ಪಾಸಾಹೇಬ ಕೇಸರಕರ ಇತರರಿದ್ದರು.
Published on

ನಿಪ್ಪಾಣಿ: ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಗುಣಮಟ್ಟದ ಶಿಕ್ಷಣದ ಜತೆಗೆ ಒಳ್ಳೆಯ ಕಲಿಕಾ ವ್ಯವಸ್ಥೆ, ಮೂಲಸೌಕರ್ಯ, ಒಳ್ಳೆಯ ವಾತಾವರಣದ ಅವಶ್ಯಕತೆ ಇದೆ. ಶಾಸಕಿಯಾದಾಗಿನಿಂದ 280ಕ್ಕೂ ಹೆಚ್ಚು ಸರ್ಕಾರಿ ಶಾಲಾ ಕೊಠಡಿಗಳನ್ನು ನಿರ್ಮಿಸುವುದರ ಜತೆಗೆ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಿದ್ದೇನೆ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.

ತಾಲೂಕಿನ ಲಖನಾಪುರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ವಿವೇಕ ಯೋಜನೆಯಡಿ 15 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಲಾದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಶನಿವಾರ ಉದ್ಘಾಟಿಸಿ ಮಾತನಾಡಿದರು.

ನಿಪ್ಪಾಣಿ ಕ್ಷೇತ್ರದಲ್ಲಿ ಹಲವು ಶಾಲಾ ಕೊಠಡಿಗಳು ಶಿಥಿಲಾವಸ್ಥೆ ತಲುಪಿದ್ದವು. ಸಚಿವೆಯಾಗಿದ್ದಾಗ ಪಟ್ಟಿಮಾಡಿ ಶಾಲಾ ಕೊಠಡಿಗಳನ್ನು ಲೋಕೋಪಯೋಗಿ ಇಲಾಖೆಯ ವಿವೇಕ ಯೋಜನೆಯಡಿಯಲ್ಲಿ ಅನುದಾನ ಮಂಜೂರು ಮಾಡಿಸಿದ್ದೇನೆ. ಶೌಚಗೃಹ, ಕುಡಿಯುವ ನೀರಿನ ವ್ಯವಸ್ಥೆ ಜತೆಗೆ ಆಟದ ಮೈದಾನ ಅಭಿವೃದ್ಧಿಪಡಿಸಿ ಉತ್ತಮ ಕಲಿಕಾ ವಾತಾವರಣ ಕಲ್ಪಿಸಿದ್ದೇನೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಿ ನಾಯಿಕ, ಲೋಕೋಪಯೋಗಿ ಇಲಾಖೆ ಅಭಿಯಂತ ವಿ.ಎ. ಭಂಡಾರಕರ, ಅಪ್ಪಾಸಾಹೇಬ ಕೇಸರಕರ, ಬಾಬುರಾವ ಲಾಟಕರ, ಲಕ್ಷ್ಮೀ ಮಗದುಮ, ದಾದಾ ಶಿಂಧೆ, ಸುರೇಂದ್ರ ಚೌಗುಲೆ, ಸಚಿನ ಚೌಗುಲೆ, ಸರಿತಾ ಗುರವ, ಸುರೇಶ ಪಾಟೀಲ, ಬಾಳಕೃಷ್ಣ ಶಿಂಧೆ, ಸುನೀಲ ಶಿತೋಳೆ, ಭಾರತ ಶಿತೋಳೆ, ಕಮಲಾ ಗುರವ, ಎಸ್‌ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net