ಶಿಕ್ಷಣ ಮೂಲಭೂತ ಹಕ್ಕಾಗಿದೆ - ಹಿರಿಯ ಶ್ರೇಣಿ ನ್ಯಾಯಾಧೀಶ ಕೆ.ಎ.ನಾಗೇಶ ಪ್ರತಿಪಾದನೆ

110422 Kudligi Legal Awareness, Assistance Program
ಕೂಡ್ಲಿಗಿಯ ನ್ಯಾಯಾಲಯದ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಕಡ್ಡಾಯ ಶಿಕ್ಷಣಾ ಕಾಯ್ದೆ ಕುರಿತ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಕಿರಿಯ ಶ್ರೇಣಿ ನ್ಯಾಯಾಧೀಶ ಮುರುಗೇಂದ್ರ ತುಬಾಕೆ ಮಾತಾನಾಡಿದರು.
Published on

ಕೂಡ್ಲಿಗಿ: ಶಿಕ್ಷಣ ಮೂಲಭೂತ ಹಕ್ಕಾಗಿದ್ದು, ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕಿದೆ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಕೆ.ಎ.ನಾಗೇಶ ಹೇಳಿದರು. ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ, ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸೋಮವಾರ ಆಯೋಜಿಸಿದ್ದ ಕಡ್ಡಾಯ ಶಿಕ್ಷಣಾ ಕಾಯ್ದೆ ಕುರಿತು ಕಾನೂನು ಅರಿವು, ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದರು.

ಕಿರಿಯ ಶ್ರೇಣಿ ನ್ಯಾಯಾಧೀಶ ಮುರುಗೇಂದ್ರ ತುಬಾಕೆ ಮಾತಾನಾಡಿ, ಶಿಕ್ಷಣವು ಮನುಷ್ಯನಿಗೆ ಅವಶ್ಯ. ಇದನ್ನು ಪಡೆಯುವ ಮೂಲಕ ಸುಶಿಕ್ಷಿತ ಸಮಾಜವನ್ನು ಕಟ್ಟಲು ಸಹಕಾರಿ. ಈ ನಿಟ್ಟಿನಲ್ಲಿ ಸರ್ಕಾರ ಪ್ರಾಥಮಿಕ ಹಂತದಲ್ಲಿಯೇ ಉಚಿತವಾಗಿ ಶಿಕ್ಷಣವನ್ನು ನೀಡುವ ಜತೆಗೆ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ. ಶಿಕ್ಷಣದಿಂದ ಮಾತ್ರವೇ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಇಲ್ಲವಾದಲ್ಲಿ ಪೋಲೀಸ್ ಠಾಣೆ ಅಥವಾ ಕೋರ್ಟ್‌ಗಳಿಗೆ ಕೆಲಸ ಜಾಸ್ತಿಯಾಗುತ್ತದೆ ಎಂದರು.

ಪ್ಯಾನಲ್ ವಕೀಲರಾದ ಟಿ.ಮಲ್ಲಿಕಾರ್ಜುನ ‘ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ’ ಕುರಿತು ಉಪನ್ಯಾಸ ನೀಡಿದರು. ಸರ್ಕಾರಿ ಸಹಾಯಕ ಅಭಿಯೋಜಕರಾದ ವಸುವಡ್ರು ಅಣ್ಣೇಶ, ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ, ಕಾರ್ಯದರ್ಶಿ ಬಿ.ಸಿದ್ದಲಿಂಗಪ್ಪ ಇದ್ದರು. ವಕೀಲೆ ಕೆ.ಎಚ್.ಎಂ.ಶೈಲಜಾ, ಅಂಗನಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net