

ಬೆಳ್ತಂಗಡಿ: ಅದೃಷ್ಟದ ಮೇಲೆ ಎಂದಿಗೂ ನಂಬಿಕೆ ಇಡಬೇಡಿ. ನಿಮ್ಮ ಕಠಿಣ ಶ್ರಮದ ಮೇಲೆ ನಂಬಿಕೆ ಇಡಿ, ಯಶಸ್ಸು ನಿಮ್ಮದಾಗುತ್ತದೆ. ನಮ್ಮ ಕಾಲೇಜಿನಲ್ಲಿ ಕಲಿತು ಹೋದ ಮಕ್ಕಳು ಇಂದು ದೇಶದ ಪ್ರತಿಷ್ಠಿತ ಕಂಪನಿಗಳಲ್ಲಿ, ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರಿಸುತ್ತಿದ್ದಾರೆ. ನಮ್ಮ ಮಕ್ಕಳು ದೇಶಕ್ಕೆ ಆಸ್ತಿಯಾಗಬೇಕು. ಹೆತ್ತವರಿಗೆ ಒಳ್ಳೆಯ ಮಗನಾಗಬೇಕು. ಹಾಗಾಗಿ ನಮ್ಮಲ್ಲಿ ಸಂಸ್ಕಾರಭರಿತ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದೇವೆ ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹೇಳಿದರು.
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಪರಿಗಣಿಸಿ ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ನೀಡಲಾದ ಶಿಕ್ಷಣ ರತ್ನ ಪ್ರಶಸ್ತಿ ಸ್ವೀಕರಿಸಿ ಭಾನುವಾರ ಮಾತನಾಡಿದರು.
ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್ ಬಳಂಜ, ಕಾರ್ಯದರ್ಶಿ ರಂಜಿತ್ ಪೂಜಾರಿ, ನಿರ್ದೇಶಕರಾದ ಮನೋಹರ್ ಬಳಂಜ, ದಿನೇಶ್ ಪೂಜಾರಿ ಅಂತರ, ಯತೀಶ್ ವೈ.ಎಲ್. ಬಳಂಜ, ಜಗದೀಶ್ ಪೂಜಾರಿ ಬಳ್ಳಿದಡ್ಡ, ಪ್ರವೀಣ್ ಡಿ.ಕೋಟ್ಯಾನ್, ಯೋಗೀಶ್ ಕೊಂಗುಳ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್ ಮೊದಲಾದವರಿದ್ದರು.