ವಿದ್ಯೆ ಯಾರೂ ಕದಿಯಲಾರದ ಸಂಪತ್ತು

IMG-20250121-WA0527
ಅರಸೀಕೆರೆ ಗ್ರಾಮಾಂತರ ತಾಲೂಕಿನ ಕಸಬಾ ಹೋಬಳಿ ಕೆಲ್ಲಂಗೆರೆಯಾ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಮೋಹನ್ ಕುಮಾರ್ ಉದ್ಘಾಟಿಸಿದರು. ಸದಾನಂದ ಮೂರ್ತಿ, ಜೈರಾಮ್,ಶಂಕರ್, ಬಸವರಾಜು, ೋಭಾ, ದಾಕ್ಷಾಯಿಣಿ, ಮಹೇಶ್, ಶಕುಂತಲಾ, ರೇಖಾ, ಚಿದಾನಂದ ಇತರರು ಹಾಜರಿದ್ದರು.
Published on

ಅರಸೀಕೆರೆ ಗ್ರಾಮಾಂತರ: ಜ್ಞಾನದ ಬೆಳಕಿನಿಂದ ಅಜ್ಞಾನದ ಕೇಡು ನೋಡಯ್ಯ ಎಂಬ ಸೂಕ್ತಿಯಂತೆ ಯಾರು ಕದಿಯಲಾರದ ಸಂಪತ್ತು ವಿದ್ಯೆ ಎಂದು ಅರಸೀಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್‌ಕುಮಾರ್ ಹೇಳಿದರು.

ತಾಲೂಕಿನ ಕಸಬಾ ಹೋಬಳಿಯ ಕೆಲ್ಲಂಗೆರೆ ಪ್ರಾಥಮಿಕ ಹಿರಿಯ ಪಾಠಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿ, ವಿದ್ಯೆಯ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮದೇ ಆದ ಶೈಲಿಯಲ್ಲಿ ಅಭಿನಯ ಮಾಡಿದ್ದಾರೆ. ಇದು ತಮ್ಮ ವಿದ್ಯಾಭ್ಯಾಸ ಕಾಲದಲ್ಲಿ ಅಚ್ಚಳಿಯದೆ ಉಳಿಯುವ ಸಂಗತಿ ಆಗುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಿಕ್ಷಕ ಸಂಘದ ಅಧ್ಯಕ್ಷ ಸದಾನಂದ ಮೂರ್ತಿ ಮಾತನಾಡಿ, ಪ್ರಸ್ತುತ ಸಾಲಿನಲ್ಲಿ ಪಾಲಕರು ನಮ್ಮ ಸರ್ಕಾರಿ ಶಾಲೆ ಬಿಟ್ಟು ಖಾಸಗಿ ಶಾಲೆಗಳ ಮುಖ ಮಾಡುತ್ತೀರುವುದು ವಿಷಾದನೀಯ. ಸರ್ಕಾರಿ ಶಾಲೆಗಳಲ್ಲೂ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಪಾಲಕರು ಈ ಬಗ್ಗೆ ಅರಿವು ಹೊಂದಬೇಕು ಎಂದು ಸಲಹೆ ನೀಡಿದರು.

ಕಾರ್ಯದರ್ಶಿ ಜೈರಾಮ್, ಜಿಲ್ಲಾ ಶಿಕ್ಷಕ ಸಂಘದ ಸಂಘಟನಾ ಕಾರ್ಯದರ್ಶಿ ಬಸವರಾಜು, ಬಿಆರ್‌ಸಿ.ಶಂಕರ್, ತಾಲೂಕು ಟಿಎಂಟಿಟಿಸಿ ಅಧ್ಯಕ್ಷ ಕುಮಾರ್, ಶಾಲಾ ಮುಖ್ಯ ಶಿಕ್ಷಕಿ ಶೋಭಾ, ದಾಕ್ಷ್ಷಾಯಿಣಿ, ಮಹೇಶ್, ಶಕುಂತಲಾ, ರೇಖಾ,ಪುಟ್ಟಸ್ವಾಮಿ, ಚಿದಾನಂದ ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಪರಿಸರ ಗೀತೆ ಹಾಗೂ ಅನ್ನದ ಬಗ್ಗೆ ನೃತ್ಯ ರೂಪಕ ನೆರದಿದ್ದ ಸಭಿಕರನ್ನು ರಂಜಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net