ಹೆಣ್ಣಿಗೆ ವಿದ್ಯೆಯೇ ಸೌಂದರ್ಯ: ಕಿರುತೆರೆ ನಟಿ ಗಿರಿಜಾ ಲೋಕೇಶ್ ಹೇಳಿಕೆ

Mbd_Education
Published on

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ಮಹಿಳೆ ಇಲ್ಲದೆ ಪ್ರಕೃತಿ ಇಲ್ಲ. ಶಕ್ತಿ ಇಲ್ಲದೆ ಶಿವನೂ ನಿಶ್ಶಕ್ತ. ಶೋಷಣೆ ಮೆಟ್ಟಿ ನಿಲ್ಲುವವಳೇ ನಿಜವಾದ ಹೆಣ್ಣು. ಹೆಣ್ಣಿಗೆ ವಿದ್ಯೆಯೇ ಸೌಂದರ್ಯ, ತೇಜಸ್ಸು ಎಂದು ನಟಿ ಗಿರಿಜಾ ಲೋಕೇಶ್ ಹೇಳಿದರು.

ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದ ಮುಂಡ್ರುದೆಗುತ್ತು ಕೆ.ಅಮರನಾಥ ಶೆಟ್ಟಿ ಸಭಾಂಗಣ(ಕೃಷಿ ಸಿರಿ) ವೇದಿಕೆಯಲ್ಲಿ ಶನಿವಾರ ಆಳ್ವಾಸ್ ಮಹಿಳಾ ವೇದಿಕೆ ‘ಸಕ್ಷಮ’ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡರ ಸ್ಮರಣೆಯಲ್ಲಿ ಆಯೋಜಿಸಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ವಾತನಾಡಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ವಾತನಾಡಿ, ಪುರುಷರಲ್ಲಿ ಸೌಂದರ್ಯ ಪ್ರಜ್ಞೆಯ ಗುಣ ಬಿತ್ತಿದ ಕೀರ್ತಿ ಮಹಿಳೆಗೆ ಸಲ್ಲುತ್ತದೆ. ಮಹಿಳೆಯು ವಿಭಿನ್ನ ಮತ್ತು ಜವಾಬ್ದಾರಿಯುತ ಪಾತ್ರದ ಮೂಲಕ ಪುರುಷರ ಬದುಕಿನಲ್ಲಿ ಪ್ರಜ್ಞೆ ಮತ್ತು ಶಕ್ತಿಯನ್ನು ಮೂಡಿಸುವಲ್ಲಿ ಕಾರಣಿಕರ್ತೆಯಾಗಿದ್ದಾಳೆ ಎಂದರು.

ಬೆಂಗಳೂರಿನ ಎಸ್.ವ್ಯಾಸ ಪರಿಗಣಿತ ವಿಶ್ವವಿದ್ಯಾಲಯದ ಯೋಗ ಮತ್ತು ವಾನವಿಕ ವಿಭಾಗದ ಡೀನ್ ಪ್ರೊ.ಕರುಣಾ ವಿಜಯೇಂದ್ರ, ಮಂಗಳೂರಿನ ಸಂಚಾರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ನಜ್ಮಾ ಫಾರುಕಿ, ಮಂಗಳೂರಿನ ಸೆಂಟರ್ ಫಾರ್ ಅಡ್ವಾನ್ಸ್ ಲರ್ನಿಂಗ್(ಸಿಎಫ್‌ಎಎಲ್)ನ ಸಂಶೋಧನಾ ನಿರ್ದೇಶಕಿ ಪ್ರೊ.ಸ್ಮಿತಾ ಹೆಗ್ಡೆ ಮುಖ್ಯ ಅತಿಥಿಯಾಗಿದ್ದರು.

ಆಳ್ವ ಫಾರ್ಮಸಿಯ ಆಡಳಿತ ನಿರ್ವಾಹಕಿ ಡಾ.ಗ್ರೀಷ್ಮಾ ಆಳ್ವ, ಜಯಶ್ರೀ ಅಮರನಾಥ ಶೆಟ್ಟಿ, ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಹೆಲ್ತ್ ಸೆಂಟರ್‌ನ ಸೀರೋಗ ತಜ್ಞೆ ಡಾ.ಹನ ಶೆಟ್ಟಿ ಉಪಸ್ಥಿತರಿದ್ದರು. ಸಕ್ಷಮ ವುಮೆನ್ಸ್ ಅಸೋಸಿಯೇಶನ್ ಅಧ್ಯಕ್ಷೆ ಮೂಕಾಂಬಿಕಾ ಸ್ವಾಗತಿಸಿದರು. ಉಪನ್ಯಾಸಕಿ ರುಚಿಕಾ ವಂದಿಸಿದರು. ಉಪನ್ಯಾಸಕಿ ಡಾ ಸುಧಾರಾಣಿ ನಿರೂಪಿಸಿದರು.

ಮಹಿಳಾ ಸಾಧಕರಿಗೆ ಸನ್ಮಾನ

ಮಹಿಳಾ ಉದ್ಯಮಿ ಮತ್ತು ಇವೊಲ್ವ್ ಸಂಸ್ಥೆ ಅಧ್ಯಕ್ಷೆ ದಿವ್ಯಾ ಡಿಸೋಜ, ರಾಷ್ಟ್ರೀಯ ಚಿಂತಕಿ ವಾತಾ ಮೀನಾಕ್ಷಿ, ಭತ್ತದ ತಳಿ ಸಂಗ್ರಹಿಸಿ ಪೋಷಿಸುವ ಸಾಣೂರಿನ ಸಾಧಕಿ ಬಾಲಕಿ ಮರಿಯಂ ಅಫ್ನಾ ಹಾಗೂ ಗಿರಿಜಾ ಲೋಕೇಶ್ ಅವರನ್ನು ಸಂಸ್ಥೆ ವತಿಯಿಂದ ಗೌರವಿಸಲಾಯಿತು.

ಬಹುಮಾನ ವಿತರಣೆ

ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದ ಸಂಸ್ಥೆಯ ಮಹಿಳಾ ಸಿಬ್ಬಂದಿ, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸದಾಕತ್, ಆಳ್ವಾಸ್ ಸಹಕಾರ ಬ್ಯಾಂಕ್‌ನ ಮುಖ್ಯ ಪ್ರಬಂಧಕಿ ಅರ್ಪಿತಾ ಶೆಟ್ಟಿ ಅಭಿನಂದನೆ ನೆರವೇರಿಸಿದರು. ಪದವಿಪೂರ್ವ ಕಾಲೇಜಿನ ಶಿಕ್ಷಕ ವೃಂದದಿಂದ ಸೆಮಿಕ್ಲಾಸಿಕಲ್ ನೃತ್ಯ ಪ್ರದರ್ಶನಗೊಂಡಿತು. ನಿತೇಶ್ ಕುಲಾಲ್ ಅವರಿಂದ ಝುಂಬಾ ಡ್ಯಾನ್ಸ್ ನಡೆಯಿತು. ಡಾ.ನಮೃತಾ ಕುಲಾಲ್ ಕಾರ್ಯಕ್ರಮ ನಡೆಸಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net