ಸರ್ಕಾರದಿಂದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ

7ldh1
Published on

ಲಿಂಗದಹಳ್ಳಿ: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಂಗದಹಳ್ಳಿ ಪದವಿ ಪೂರ್ವ ಕಾಲೇಜಿಗೆ ಅಗತ್ಯ ಸೌಲಭ್ಯವನ್ನು ಕಲ್ಪಿಸಲು ಅನುದಾನ ಮಂಜೂರು ಮಾಡಿದೆ ಎಂದು ಶಾಸಕ ಜಿ.ಹೆಚ್.ಶ್ರೀನಿವಾಸ್ ಹೇಳಿದರು.

ಲಿಂಗದಹಳ್ಳಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ 1 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗಿರುವ ಮೂರು ತರಗತಿ ಕೊಠಡಿಗಳು, ಎರಡು ಲ್ಯಾಬರೇಟರಿ ಕೊಠಡಿ, ಎರಡು ಶೌಚಗೃಹ ಕೊಠಡಿ ಉದ್ಘಾಟಿಸಿ ಮಾತನಾಡಿ, ಲಿಂಗದಹಳ್ಳಿ ಪದವಿ ಪೂರ್ವ ಕಾಲೇಜಿನಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಜತೆಗೆ ಕ್ರೀಡೆ ಹಾಗೂ ಸಾಂಸ್ಕೃತಿ ಚಟುವಟಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಶೈಕ್ಷಣಿಕ ಲಿತಾಂಶ ಉತ್ತಮವಾಗಿದೆ ಎಂದು ತಿಳಿಸಿದರು.

ಪದವಿ ಪೂರ್ವ ಶಿಕ್ಷಣಾ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಪುಟ್ಟನಾಯ್ಕ, ಪ್ರಾಚಾರ್ಯ ಸಿ.ಜಯಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಲ್.ತಮ್ಮಯ್ಯ, ಲಿಂಗದಹಳ್ಳಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಚಂದ್ರಶೇಖರ್ ಪಾಟೀಲ್, ಇಂಜಿನಿಯರ್ ದಯಾಶಂಕರ್, ಕಿರಣ್ ನಾಯ್ಕ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net