

ವಿಜಯವಾಣಿ ಸುದ್ದಿಜಾಲ ಉಡುಪಿ
ಯೋಚನೆ, ಆಚಾರ-ವಿಚಾರಗಳಿಗೆ ತಕ್ಕಂತೆ ಬದುಕು ಸಹ ರೂಪಗೊಳ್ಳುತ್ತದೆ. ಹಾಗಾಗಿ ನಮ್ಮ ಬದುಕನ್ನು ಗೌರವಯುತವಾಗಿ ನಡೆಸಲು ಶಿಕ್ಷಣ ಮುಖ್ಯ. ನಮ್ಮನ್ನು ನಾವು ಮೊದಲು ಅರಿತುಕೊಳ್ಳಬೇಕು ಎಂದು ಜಿಲ್ಲಾ ಲಯನ್ಸ್ ವಾಜಿ ಗವರ್ನರ್ ವಿ.ಜಿ.ಶೆಟ್ಟಿ ನುಡಿದರು.
ಉಡುಪಿ ಅಂಬಾಗಿಲಿನ ಅಮೃತ ಗಾರ್ಡನ್ನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.
ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು. ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಮಂಗಳೂರು ವಿವಿ ಮಟ್ಟ ಎಂಎ ಇತಿಹಾಸ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಗಳಿಸಿದ ನಿಶಾ ಬಂಗೇರ, ಎಂಎಸ್ಡಬ್ಲ್ಯೂ ವಿಭಾಗದಲ್ಲಿ ದ್ವಿತೀಯ ರ್ಯಾಂಕ್ ಗಳಿಸಿದ ಭವ್ಯಶ್ರೀ, ಬಿಎಸ್ಡಬ್ಲ್ಯೂ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಗಳಿಸಿದ ಶ್ರೀನಿಧಿ ಹಾಗೂ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ ಸಾಧನೆಗೈದ ಐಂದು ಮಂದಿ ಕ್ರೀಡಾಪಟುಗಳನ್ನು ಸನ್ಮಾನಿಸಿದರು.
ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ ಕಾಲೇಜಿನ ವರದಿ ವಾಚಿಸಿದರು. ಪಠ್ಯೇತರ ಹಾಗೂ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ದತ್ತಿನಿಧಿ ಪುರಸ್ಕಾರ ಹಾಗೂ ಇನ್ನಿತರ ಬಹುವಾನ ವಿತರಿಸಲಾಯಿತು.
ಲಯನ್ಸ್ ಉಡುಪಿ ಅಮೃತ ಅಧ್ಯಕ್ಷೆ ಭಾರತಿ ಎಚ್.ಎಸ್., ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಶೆಟ್ಟಿ, ಶಿಕ್ಷಕ-ರಕ್ಷಕ ಸಂ ಅಧ್ಯಕ್ಷ ರಾಧಾಕೃಷ್ಣ ಪೈ, ವಾಜಿ ಪ್ರಾಂಶುಪಾಲ ಡಾ.ಗಣನಾಥ ಶೆಟ್ಟಿ ಎಕ್ಕಾರು, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ.ರಘು ನಾಯ್ಕ, ಪ್ರಶಾಂತ ನೀಲಾವರ, ಐಕ್ಯೂಎಸಿ ಸಂಚಾಲಕ ಡಾ.ಮೇವಿ ಮಿರಾಂಡ, ಶೈಕ್ಷಣಿಕ ಸಲಹೆಗಾರ ಡಾ.ಶ್ರೀಧರ ಭಟ್ಟ, ಭೌತಶಾಸ ಸಹಪ್ರಾಧ್ಯಾಪಕಿ ಹಮಿದಾ ಬಾನು, ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಡಾ.ಉದಯ ಶೆಟ್ಟಿ ಕೆ., ಸುಷ್ಮಾ ಟಿ., ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಅಧ್ಯಕ್ಷರಾದ ರಿಷಿತ್ ಎನ್. ಸಾಲಿಯಾನ, ನೈನಾ ಶೆಟ್ಟಿ, ಕಾರ್ಯದರ್ಶಿಗಳಾದ ಕೀರ್ತಿ, ಓಂಕಾರ, ಅನಿಲ ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಶರಣ್ಯಾ, ನೈನಾ ಹಾಗೂ ಶಿವಾನಿ ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ಉತ್ತಮ ನಡತೆ ರೂಪಿಸಿಕೊಳ್ಳಬೇಕು. ಸಹನೆ, ತಾಳ್ಮೆ, ಸೌಹಾರ್ದ ಭಾವನೆಯಿಂದ ವರ್ತಿಸಬೇಕು. ಏಕಾಗ್ರತೆ, ಹೃದಯ ವೈಶಾಲ್ಯತೆ ಮುಂತಾದ ಮೌಲ್ಯಗಳು ಬದುಕನ್ನು ಸಾರ್ಥಕಗೊಳಿಸುತ್ತದೆ. ಚಂದ್ರಶೇಖರ ದೋಮ. ವಾಜಿ ಪ್ರಾಂಶುಪಾಲ, ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ