ಶಿಕ್ಷಣ ಒಂದೇ ಎಲ್ಲ ಸಮಸ್ಯೆಗೆ ಪರಿಹಾರ

Programe Inaguration.
Published on

ಭಟ್ಕಳ: ಶಿಕ್ಷಣ ಒಂದೇ ನಮ್ಮೆಲ್ಲ ಸಮಸ್ಯೆಗಳಿಗೆ ಪರಿಹಾರ. ಶೈಕ್ಷಣಿಕವಾಗಿ ನಾವು ಇನ್ನೂ ಸಾಧಿಸಬೇಕಾದದ್ದು ಬಹಳಷ್ಟು ಇದೆ. ಈ ದಿಕ್ಕಿನಲ್ಲಿ ನಾವು ಪ್ರಯತ್ನಿಸಬೇಕು ಎಂದು ಉಪ್ಪುಂದ ಯುವ ಮಾನಸ ಗಾಣಿಗ ಎಜುಕೇಶನಲ್ ಮತ್ತು ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ ಸುಬ್ಬಯ್ಯ ಗಾಣಿಗ ಶಿವಮೊಗ್ಗ ಹೇಳಿದರು.

ಭಟ್ಕಳ ತಾಲೂಕು ಮುಗಳಿ ಕೋಣೆ ಶ್ರೀ ಗೋಪಾಲಕೃಷ್ಣ ಸಭಾ ಭವನದಲ್ಲಿ ಆಯೋಜಿಸಿದ್ದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಮತ್ತು ಎಸ್​ಎಸ್​ಎಲ್​ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿ ಪಡೆದ ಗಾಣಿಗ ಸಮಾಜದ ಪ್ರತಿಭೆಗಳಿಗೆ ಪುರಸ್ಕಾರ, ಸಾಧಕರರಿಗೆ, ನಿವೃತ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯುವ ಮಾನಸ ಗಾಣಿಗ ಎಜುಕೇಶನಲ್ ಮತ್ತು ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಂಜುನಾಥ ಶಿಕಾರಿಪುರ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಗಾಣಿಗ ಸಮಾಜ ಸೇವಾ ಟ್ರಸ್ಟ್ ಭಟ್ಕಳ ಅಧ್ಯಕ್ಷ ಸುಭಾಷ ಶೆಟ್ಟಿ ಮಾತನಾಡಿದರು. ಶ್ರೀ ಗೋಪಾಲಕೃಷ್ಣ ದೇವಸ್ಥಾನ ಆಡಳಿತ ಮಂಡಳಿ ಭಟ್ಕಳ ಇದರ ಅಧ್ಯಕ್ಷ ನಾರಾಯಣ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸವಿತಾ ಗಾಣಿಗ ಖಜಾಂಚಿ ಅನಂತ ಗಾಣಿಗ ,ಸುಬ್ರಹ್ಮಣ್ಯ ಗಾಣಿಗ, ಸಂತೋಷ ಗಾಣಿಗ, ರಾಜು ಗಾಣಿಗ, ಶಿವಾನಂದ ಗಾಣಿಗ, ಮಂಜುನಾಥ ಗಾಣಿಗ, ರತ್ನಾಕರ ಗಾಣಿಗ,. ಗಾಣಿಗ ಸಮಾಜ ಸೇವಾ ಟ್ರಸ್ಟ್ ಉಪಾಧ್ಯಕ್ಷ ಗಾಜಾನನ ಶೆಟ್ಟಿ, ರಾಧಾ ಶೆಟ್ಟಿ, ಎಂ .ಆರ್ ಮುರ್ಡೆಶ್ವರ , ಮೋಹನ ಶೆಟ್ಟಿ, ಸುಧಾಕರ ಶೆಟ್ಟಿ, ಇದ್ದರು ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ನಿವೃತ್ತ ನೌಕರರಿಗೆ, ಸಾಧಕರಿಗೆ ಸನ್ಮಾನಿಸಲಾಯಿತು. ಪ್ರಕಾಶ್ ಶಿರಾಲಿ ಸ್ವಾಗತಿಸಿ,ಅತಿಥಿಗಳ ಪರಿಚಯಿಸಿದರು. ರಾಜೇಶ್ ಶೆಟ್ಟಿ ವಂದನಾರ್ಪಣೆ ಮಾಡಿದರು. ಮನೋಜ ಶೆಟ್ಟಿ, ಉಷಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net