ಶಿಕ್ಷಣವೊಂದೇ ಬದಲಾವಣೆಗೆ ಮಾರ್ಗ

CLK PRATHIBA UDAGATANe
Published on

ಚಳ್ಳಕೆರೆ: ಮಕ್ಕಳು ಶೈಕ್ಷಣಿಕ ಸಾಧನೆಯಲ್ಲಿ ಸಮುದಾಯದ ಶೋಷಣೀಯ ಪರಿಸ್ಥಿತಿಗಳನ್ನು ಬದಲಾಯಿಸಬೇಕಿದೆ ಎಂದು ಕೋಡಿಹಳ್ಳಿ ಆದಿಜಾಂಬವ ಬೃಹನ್ಮಠ ಶ್ರೀ ಷಡಕರಮುನಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಮಾದಿಗ ನೌಕರರ ಸಾಂಸ್ಕೃತಿಕ ಸಂಘ ತಾಲೂಕು ಶಾಖೆ ನಗರದ ಅನಂತನಾಥ ಜೈನಭವನದಲ್ಲಿ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಸಮುದಾಯದ ಪ್ರಗತಿಪರ ಬೆಳವಣಿಗೆಗೆ ಅಂಬೇಡ್ಕರ್ ಆದಿಯಾಗಿ ಶರಣ, ಸಂತರ ಬದುಕಿನ ಹೋರಾಟಗಳಿವೆ. ಆದರ್ಶ ಮಾರ್ಗದಲ್ಲಿ ಮುಖ್ಯವಾಹಿನಿಗೆ ಬರಬೇಕು. ರಾಜಕೀಯ ಪ್ರಾತಿನಿಧ್ಯಕ್ಕಾಗಿ ಸಂಘಟನೆ ಬೆಳೆಯಬೇಕಿದೆ ಎಂದು ಹೇಳಿದರು.

ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಸಚಿವರಾದ ಆರ್.ಬಿ.ತಿಮ್ಮಾಪುರ್, ಡಿ.ಸುಧಾಕರ್, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಶಾಸಕ ಟಿ.ರಘುಮೂರ್ತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net