ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಶಿಕ್ಷಣವೇ ಪರಿಹಾರ

12 ckm 8
ಚಿಕ್ಕಮಗಳೂರಿನಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಜಾಥಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶುಭಗೌಡರ್ ಹಸಿರು ನಿಶಾನೆ ತೋರಿಸಿದರು. ಡಿಸಿ ಮೀನಾ ನಾಗರಾಜ್, ರಾಜಾನಾಯ್ಕ, ರವಿಕುಮಾರ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಬಾಲಕಾರ್ಮಿಕ ಪದ್ಧತಿ ಸಮಾಜಕ್ಕೆ ಮಾರಕವಾಗಿದ್ದು, ಅಂಥ ಮಕ್ಕಳನ್ನು ಗುರುತಿಸಿ ಶಿಕ್ಷಣ ನೀಡಿದಾಗಲೇ ಈ ಪಿಡುಗಿಗೆ ಪರಿಹಾರ ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ತಿಳಿಸಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ ಇಂದು ನಗರದ ಟೌನ್ ಮಹಿಳಾ ಸಮಾಜ ಶಿಕ್ಷಣ ಸಂಸ್ಥೆಯ ರೋಟರಿ ಎಂ.ಎಲ್. ವಾಸುದೇವ ಮೂರ್ತಿ ಕಮ್ಯೂನಿಟಿ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲೆಂದೇ ಸರ್ಕಾರವು ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿದೆ. ಪರಿಣಾಮಕಾರಿ ಕಾನೂನುಗಳನ್ನು ರಚಿಸಿದೆ. ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವೆಂದು ನಿರಂತರ ಜಾಗೃತಿ ಮೂಡಿಸಲಾಗುತ್ತಿದೆ. ಸರ್ಕಾರವಲ್ಲದೇ ಸರ್ಕಾರೇತರ ಸಂಘ ಸಂಸ್ಥೆಗಳ ಜೊತೆಗೂಡಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ೬ ವರ್ಷದ ಪ್ರತಿ ಮಕ್ಕಳನ್ನು ಶಾಲೆಗೆ ಸೇರಿಸಿ ಅವರಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಪ್ರಜ್ಞಾವಂತ ನಾಗರೀಕರನ್ನಾಗಿ ಮಾಡುವುದು ಪ್ರತಿಯೊಬ್ಬ ಪಾಲಕರ ಜವಾಬ್ದಾರಿಯಾಗಿದೆ. ಜಿಲ್ಲೆಯಲ್ಲಿ ಕಳೆದ ವರ್ಷ ೧೮ಕ್ಕೂ ಹೆಚ್ಚು ಬಾಲಕಾರ್ಮಿಕರನ್ನು ಗುರುತಿಸಿ ಕ್ರಮಕೈಗೊಳ್ಳಲಾಗಿದೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವುದು. ಕೇವಲ ಸರ್ಕಾರ, ಸಂಘ ಸಂಸ್ಥೆಗಳಿAದ ಮಾತ್ರವಲ್ಲ ಇದರ ನೈತಿಕ ಜವಾಬ್ದಾರಿಯನ್ನು ಎಲ್ಲರೂ ಹೊರಬೇಕು. ಸರ್ಕಾರ ಮಕ್ಕಳಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಉಚಿತ ಶಿಕ್ಷಣವನ್ನು ನೀಡುತ್ತಿದೆ. ಇದರ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬ ನಾಗರೀಕರು ತಮ್ಮ ಮಕ್ಕಳನ್ನು ಸಮಾಜದ ಸತ್ಪçಜೆಗಳನ್ನಾಗಿ ಮಾಡಬೇಕು ಎಂದರು.
ಜಿಪA ಸಿಇಒ ಡಾ. ಗೋಪಾಲಕೃಷ್ಣ ಮಾತನಾಡಿ, ಸಮಾಜದಲ್ಲಿ ಬಾಲಕಾರ್ಮಿಕರು, ಕಿಶೋರ ಕಾರ್ಮಿಕರು, ಕಂಡು ಬಂದಲ್ಲಿ ಅವರ ರಕ್ಷಣೆಗೆ ಮುಂದಾಗಬೇಕು. ಮಕ್ಕಳನ್ನು ಕೆಲಸಕ್ಕೆ ತೊಡಗಿಸಿಕೊಂಡವರು ಮತ್ತು ಮಕ್ಕಳ ಪಾಲಕರಿಗೆ ಅಗತ್ಯ ತಿಳಿವಳಿಕೆ ನೀಡಿ ಮಕ್ಕಳನ್ನು ರಕ್ಷಿಸ ಬೇಕು ಎಂದು ತಿಳಿಸಿದರು.
ಸಭಾ ಕಾರ್ಯಕ್ರವಕ್ಕೂ ಮೊದಲು ತಾಪಂ ಆವರಣದಿಂದ ಟೌನ್ ಮಹಿಳಾ ಸಮಾಜ ಶಿಕ್ಷಣ ಸಂಸ್ಥೆಯವರೆಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶುಭಗೌಡರ್ ಹಸಿರು ನಿಶಾನೆ ತೋರಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ ಕೆ.ಎಸ್., ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಸಹಾಯಕ ಕಾರ್ಮಿಕ ಆಯುಕ್ತರಾದ ಕೆ.ಎಲ್. ರವಿಕುಮಾರ್, ವಕೀಲರ ಸಂಘದ ಅಧ್ಯಕ್ಷ ಡಿ.ಬಿ. ಸುಜೇಂದ್ರ, ಟೌನ್ ಮಹಿಳಾ ಸಮಾಜ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಗೀತಾ ಎಲ್.ಎಂ. ಮೂರ್ತಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net