ಶಿಕ್ಷಣ ಸಚಿವರು, ಇಲಾಖೆ ಆಯುಕ್ತ ಇಬ್ಬರೂ ಆಸ್ಪತ್ರೆಗೆ ದಾಖಲು...

Suresh Kumar 10 March 20
Published on

ಬೆಂಗಳೂರು: ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಅವರಿಗೆ ಇತ್ತೀಚೆಗಷ್ಟೇ ಕರೊನಾ ಸೋಂಕು ದೃಢಪಟ್ಟು, ಇಷ್ಟು ದಿನ ಹೋಂ ಕ್ವಾರಂಟೈನ್‌ನಲ್ಲಿದ್ದರು. ಶನಿವಾರ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕರೊನಾದಿಂದ ಶಿಕ್ಷಕರ ಸಾವು ಹೆಚ್ಚಾಗುತ್ತಿದ್ದು, ವಿದ್ಯಾಗಮ ಯೋಜನೆ ಸ್ಥಗಿತಗೊಳಿಸಬೇಕೆಂಬ ಒತ್ತಾಯ ಹೆಚ್ಚಾಗಿದ್ದ ಕಾರಣ, ಶನಿವಾರ ಮಧ್ಯಾಹ್ನವಷ್ಟೇ ಸಚಿವರು ಆ ಯೋಜನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುತ್ತಿರುವುದಾಗಿ ಘೋಷಿಸಿದ್ದರು. ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಆಯುಕ್ತ ಅನ್ಬುಕುಮಾರ್ ಅವರಿಗೆ ಕೂಡ ಶುಕ್ರವಾರ ಕರೊನಾ ದೃಢಪಟ್ಟಿದ್ದು, ಕೆಲ ಲಕ್ಷಣಗಳು ಇರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಚಾಮರಾಜನಗರ ಮತ್ತು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಚಾಮರಾಜನಗರ ಪ್ರವಾಸ ಮುಗಿಸಿದ ಬಳಿಕ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನೆಲೆಯಲ್ಲಿ ಪ್ರವಾಸ ಮೊಟಕುಗೊಳಿಸಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net