ಬಾರಿ ಮಳೆಯಿಂದ ಮಲೆನಾಡಿನ ಶಾಲಾ ಕಟ್ಟಡಗಳಿಗೆ ದೊಡ್ಡ ಮಟ್ಟದ ಹಾನಿ ಆಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಇಂತಹ ಕಟ್ಟಡಗಳನ್ನು ಪದೇಪದೇ ದುರಸ್ತಿ ಮಾಡುವುದಕ್ಕಿಂತ ಹೆಚ್ಚಾಗಿ ಶಾಶ್ವತ ಕಟ್ಟಡಗಳ ನಿರ್ಮಾಣಕ್ಕೆ ಯೋಜನೆ ರೂಪಿಸುತ್ತೇವೆ. ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮುಂತಾದ ಮಲೆನಾಡಿನ ಪ್ರದೇಶದಲ್ಲಿ ಮಳೆಯಿಂದ ಶಾಲಾ ಕೊಠಡಿಗಳ ಪುನರ್ ನಿರ್ಮಾಣಕ್ಕೆ ಒಂದೇ ಬಾರಿ ಅನುದಾನ ಸಾಕಾಗುವುದಿಲ್ಲ. ಈ ಕುರಿತೂ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುತ್ತೇನೆ ಎಂದರು.