ಶಿಕ್ಷಣದತ್ತ ಚಿತ್ತ ಹರಿಸಲು ಜಗಳೂರು ಶಾಸಕ ರಾಮಚಂದ್ರ ಸಲಹೆ

JLR Kutira vitarane 15
Published on

ಜಗಳೂರು: ಪರಿಶಿಷ್ಟ ಸಮುದಾಯ ಶಿಕ್ಷಣದ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ ಹೇಳಿದರು.

ಲಿಡ್ಕರ್ ನಿಗಮದಿಂದ 8 ಮಂದಿ ಫಲಾನುಭವಿಗಳಿಗೆ ತಾಲೂಕು ಕಚೇರಿಯಲ್ಲಿ ಗುರುವಾರ ಪಾದುಕೆ ಕುಟೀರ ಸೌಲಭ್ಯ ವಿತರಿಸಿ ಮಾತನಾಡಿದರು.

ಮಹಾ ಶರಣ ಹರಳಯ್ಯ ಅವರ ಕಾಲದಿಂದಲೂ ಚಮ್ಮಾರಿಕೆ ಸಾಂಪ್ರದಾಯಿಕ ವೃತ್ತಿಯಾಗಿ ಬೆಳೆದು ಬಂದಿದೆ. ಆದರೆ, ಆಧುನಿಕ ಯುಗದಲ್ಲಿ ಸಮುದಾಯದವರು ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಆರ್ಥಿಕ ಸಬಲತೆ ಸಾಧಿಸಬೇಕು ಎಂದರು.

ಪರಿಶಿಷ್ಟ ಜಾತಿ, ಪಂಗಡಗಳಿಗೆ ಸರ್ಕಾರ ಹತ್ತಾರು ಯೋಜನೆ ಕೊಟ್ಟಿದೆ, ಅವುಗಳ ಸದುಪಯೋಗಪಡಿಸಿಕೊಂಡು ಸ್ವಾವಲಂಬಿಗಳಾಗಿ ಬದುಕು ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಹೇಶ್ವರಪ್ಪ ಮಾತನಾಡಿ, ಸರ್ಕಾರ ನೀಡುವ ಕುಟೀರಗಳನ್ನು ಬಳಕೆ ಮಾಡಿಕೊಳ್ಳಬೇಕು, ಬೇರೆಯವರಿಗೆ ಮಾರಾಟ ಮಾಡಬಾರದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net