

ತುಮಕೂರು: ಕರೊನಾ ಸೋಂಕಿನ ಭೀತಿ ನಡುವೆಯೂ ಮುಂದಿನ ಶೈಕ್ಷಣಿಕ ವರ್ಷ ಆರಂಭದ ಬಗ್ಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಸಿದ್ಧಗಂಗಾ ಮಠಕ್ಕೆ ಬುಧವಾರ ಭೇಟಿ ನೀಡಿದ್ದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, 2021ರ ಜುಲೈ 15ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವ ಚಿಂತನೆ ನಡೆದಿದೆ. ಕರೊನಾ ಎರಡನೇ ಅಲೆ ಶುರುವಾಗಿದೆ. ಅದನ್ನೂ ಗಮನದಲ್ಲಿ ಇರಿಸಿಕೊಳ್ಳಬೇಕು. ಪಠ್ಯಗಳಲ್ಲಿ ಭಗವದ್ಗೀತೆ ಅಳವಡಿಕೆ ಕುರಿತು ಆಗ್ರಹ ಇದೆ. ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿರಿ ಕಬಡ್ಡಿ ಕ್ರೀಡಾಪಟುಗಳಿದ್ದ ಕಾರು ಅಪಘಾತ: ಆಟಗಾರರಿಬ್ಬರು ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ
ಶಾಲೆಗಳಲ್ಲಿ 1ರಿಂದ 5ನೇ ತರಗತಿ ಮಕ್ಕಳಿಗೆ ತರಗತಿ ಆರಂಭಿಸಬಾರದು. ಖಾಸಗಿ ಶಾಲೆಗಳು ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಲಾಗುತ್ತೆ. ಮಾರ್ಚ್ 1ರಿಂದ 1ರಿಂದ 5ನೇ ತರಗತಿ ಆರಂಭಿಸುವ ಇಚ್ಛೆ ನನಗೂ ಇತ್ತು. ಆದರೆ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಹಾಗಾಗಿ ಚರ್ಚೆ ಮಾಡಿ ಶಾಲೆ ಆರಂಭ ಬೇಡ ಎಂಬ ಅಭಿಪ್ರಾಯಕ್ಕೆ ಬಂದಿದ್ದೇವೆ ಎಂದು ಸುರೇಶ್ ಕುಮಾರ್ ತಿಳಿಸಿದರು.
ಅಜೀಂ ಪ್ರೇಮ್ ಜಿ ವಿವಿ ಆಘಾತಕಾರಿ ವರದಿ ನೀಡಿದೆ. ಶಾಲೆ ಆರಂಭವಾಗದ ಹಿನ್ನೆಲೆಯಲ್ಲಿ ಮಕ್ಕಳು ಗಣಿತ ಮರೆತಿದ್ದಾರೆ, ಭಾಷೆ ಮರೆತಿದ್ದಾರೆ ಎಂಬುದು ವರದಿಯಲ್ಲಿ ಇದೆ ಎಂದು ಹೇಳಿದರು.