ಶಿಕ್ಷಣದ ಪ್ರಗತಿಗೆ ಸಹಕರಿಸಿ

7knk2
ಕನಕಗಿರಿಯ ಆದರ್ಶ ಶಾಲೆಯಲ್ಲಿ ಆಯೋಜಿಸಿದ್ದ ಪಾಲಕರ ಸಭೆಯಲ್ಲಿ ಮುಖ್ಯಶಿಕ್ಷಕ ಶಿವಕುಮಾರ ಮಾತನಾಡಿದರು. ಶಿಕ್ಷಕರಾದ ಶಾರದಾ, ಶಶಿಭೂಷಣ್, ಕಾವ್ಯ ಇತರರಿದ್ದರು.
Published on

ಕನಕಗಿರಿ: ಮಕ್ಕಳ ಶೈಕ್ಷಣಿಕ ಸುಧಾರಣೆಗೆ ಶಿಕ್ಷಕರು ಹಾಗೂ ಪಾಲಕರು ಶ್ರಮ ಅಗತ್ಯ. ಈ ನಿಟ್ಟಿನಲ್ಲಿ ಶಿಕ್ಷಕರು ಪಾಲಕರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಆದರ್ಶ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಹೊನ್ನೂರಸಾಬ ಉಪ್ಪು ಹೇಳಿದರು.

ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪಾಲಕರ ಸಭೆಯಲ್ಲಿ ಶನಿವಾರ ಮಾತನಾಡಿದರು. ಅಖಂಡ ಗಂಗಾವತಿ ತಾಲೂಕಿನ ಏಕೈಕ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಯಾಗಿರುವ ಆದರ್ಶ ಶಾಲೆಗೆ ನಾನಾ ಕಡೆಗಳಿಂದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆಯಾಗಿ ಬಂದಿರುತ್ತಾರೆ.

ಇವರ ಭವಿಷ್ಯ ಉಜ್ವಲವಾಗಿಸುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಶಾಲೆಯಲ್ಲಿ ಹಮ್ಮಿಕೊಳ್ಳುವ ಪಠ್ಯೇತರ ಚಟುವಟಿಕೆಗಳ ಕುರಿತು ವಿದ್ಯಾರ್ಥಿಗಳು ಪೂರ್ವ ತಯಾರಿಯಾಗುವ ನಿಟ್ಟಿನಲ್ಲಿ ಮುಂಚಿತವಾಗಿಯೇ ಮಾಹಿತಿ ನೀಡಬೇಕೆಂದರು. ಅರ್ಧ ವಾರ್ಷಿಕ ಪರೀಕ್ಷೆ ಸಮೀಪಿಸುತ್ತಿದ್ದು, ಇನ್ನುಳಿದ ಪಾಠಗಳನ್ನು ಪೂರ್ಣಗೊಳಿಸಬೇಕು. ಮಕ್ಕಳಿಗೆ ಅರ್ಥವಾಗದ ಪಾಠಗಳನ್ನು ಮರು ಬೋಧನೆ ಮಾಡಿ ಶಿಕ್ಷಣದ ಪ್ರಗತಿಗೆ ಮುಂದಾಗಬೇಕು ಎಂದರು.

ವಲಯ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆಯಾದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಮುಖ್ಯಶಿಕ್ಷಕ ಶಿವಕುಮಾರ, ಶಿಕ್ಷಕರಾದ ಶಾರದಾ, ಶಶಿಭೂಷಣ್, ಕಾವ್ಯ, ದೀಪಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net