ದ್ವಿಭಾಷಾ ನೀತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

CTD KARAVE STRIKE----
filter: 104; fileterIntensity: 0.8; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 44;
Published on

ಚಿತ್ರದುರ್ಗ: ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ)ಕಾರ‌್ಯಕರ್ತರು ನಗರದ ಒನಕೆ ಓಬವ್ವ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ತಮಿಳುನಾಡಿನಲ್ಲಿ 1968ರಿಂದಲೇ ತ್ರಿಭಾಷಾ ನೀತಿ ತಿರಸ್ಕರಿಸಿ, ತಮಿಳು ಮತ್ತು ಇಂಗ್ಲಿಷ್ ಒಳಗೊಂಡ ದ್ವಿಭಾಷಾ ನೀತಿಯನ್ನು ಯಶಸ್ವಿ ಯಾಗಿ ಜಾರಿಗೊಳಿಸಲಾಗಿದೆ. ಮಹಾರಾಷ್ಟ್ರ ಸರ್ಕಾರವೂ ತ್ರಿಭಾಷ ನೀತಿ ರದ್ದುಗೊಳಿಸಿ, ಮರಾಠಿ ಮತ್ತು ಇಂಗ್ಲಿಷ್ ಕಲಿಕೆಯನ್ನು ಕಡ್ಡಾಯಗೊಳಿಸಿದೆ.

ಆದ್ದರಿಂದ ಕರ್ನಾಟದಲ್ಲೂ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಒಳಗೊಂಡಿರುವ ದ್ವಿಭಾಷಾ ನೀತಿ ಜಾರಿಗೆ ತರಬೇಕು. ತೃತೀಯ ಭಾಷೆ ಹಿಂದಿಯನ್ನು ಪಠ್ಯದಿಂದ ಹೊರಗಿಡಬೇಕು. ರಾಜ್ಯ ಮತ್ತು ಕೇಂದ್ರೀಯ ಶಿಕ್ಷಣ ವ್ಯವಸ್ಥೆಯಲ್ಲೂ ಏಕರೂಪದ ದ್ವಿಭಾಷಾ ನೀತಿ ಜಾರಿಯಾಗಬೇಕು ಎಂದು ಆಗ್ರಹಿಸಿದರು.

ಸಿಬಿಎಸ್‌ಇ, ಐಸಿಎಸ್‌ಇ ಪಠ್ಯ ಕ್ರಮಗಳಲ್ಲೂ ಪ್ರಥಮ ಭಾಷೆಯನ್ನಾಗಿ ಕನ್ನಡವನ್ನೇ ಕಡ್ಡಾಯಗೊಳಿಸಬೇಕು. ಕನ್ನಡ ಮಾಧ್ಯಮ ಶಾಲೆ ಗಳನ್ನು ಬಲಪಡಿಸುವುದರೊಂದಿಗೆ ಉತ್ತಮ ಗುಣಮಟ್ಟದ ಇಂಗ್ಲಿಷ್ ಶಿಕ್ಷಣ ಕೊಡಬೇಕೆಂದು ಒತ್ತಾಯಿಸಿ ಪ್ರತಿಭಟನಾಕಾರರು ಜಿಲ್ಲಾಧಿ ಕಾರಿಗೆ ಮನವಿ ಸಲ್ಲಿಸಿದರು.

ವೇದಿಕೆ ಜಿಲ್ಲಾಧ್ಯಕ್ಷ ಟಿ.ರಮೇಶ್, ವಿಜಯಕುಮಾರ್, ಜಿ. ರಾಜಪ್ಪ, ಎಸ್.ಬಿ. ಗಣೇಶ್, ಆರ್.ಬಿ. ಲಕ್ಷ್ಮಣ್, ನೀಲಕಂಠ, ಘನಶ್ಯಾಮ್, ಪ್ರಸಾದ್‌ಮಲ್ಲ, ರಮೇಶ್, ರಾಮು, ಅನಿಲ್, ಉಮೇಶ್, ವಸಂತ್, ವೆಂಕಟೇಶ್, ರಾಮಕೃಷ್ಣಪ್ಪ, ಗೋ.ಬಸವರಾಜ್, ಚಂದ್ರಕಲಾ, ಜಯಲಕ್ಷ್ಮೀ, ಮಂಜುಳಾ, ಜಯಲಕ್ಷ್ಮೀ, ದಾದಾಪೀರ್, ಜಾಕೀರ್, ಸುಮಾ, ಟಿ.ಕೆ. ಶಿವಮೂರ್ತಿ, ರುದ್ರೇಶ್, ಎಚ್. ಪ್ರಶಾಂತ್‌ರೆಡ್ಡಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net