ಕ್ರೀಡಾ ಚಟುವಟಿಕೆ ಇಲ್ಲದ ಶಿಕ್ಷಣ ಪರಿಪೂರ್ಣವಾಗದು

Education without sports activities is incomplete.
ಕೆರೂರ ಸಮೀಪದ ಕೀರಬೂದಿಹಾಳ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಸರ್ಕಾರಿ ಪ್ರಾಥಮಿಕ ಶಾಲೆಯ ವಲಯ ಮಟ್ಟದ ಕ್ರೀಡಾಕೂಟವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ಪೆಟ್ಲೂರ ಉದ್ಘಾಟಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನವರ, ಶಿಕ್ಷಣ ಸಂಯೋಜಕರಾದ ಗೌಡರ, ಟಿ.ಬಿ.ಹಳ್ಳಿ, ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಮೇಟಿ, ಮುಖ್ಯಗುರು ಪಿ.ಸಿ.ತೆಗ್ಗಿ ಇದ್ದರು.
Published on

ಕೆರೂರ: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆಗಳು ಸಹಕಾರಿಯಾಗಿವೆ. ಇದರಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ಪೆಟ್ಲೂರ ಹೇಳಿದರು.

ಸಮೀಪದ ಕೀರಬೂದಿಹಾಳ ಗ್ರಾಮದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಕ್ರೀಡಾ ಚಟುವಟಿಕೆಗಳಿಲ್ಲದ ಶಿಕ್ಷಣ ಪರಿಪೂರ್ಣವಾಗದು. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ದೈಹಿಕ ಚಟುವಟಿಕೆ ಅನಿವಾರ್ಯ ಹಾಗೂ ಕಡ್ಡಾಯ ಎಂದು ಹೇಳಿದರು.

ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನವರ, ಶಿಕ್ಷಣ ಸಂಯೋಜಕರಾದ ಗೌಡರ, ಟಿ.ಬಿ.ಹಳ್ಳಿ, ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಮೇಟಿ, ಮುಖ್ಯಗುರು ಪಿ.ಸಿ.ತೆಗ್ಗಿ, ಶಿಕ್ಷಕ ಎಚ್.ಸಿ.ಚಿಕ್ಕೂರ, ಸಂಗಮೇಶ ದಾದನಟ್ಟಿ, ಚಂದ್ರು ಅರಸಿಕೇರಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀ ಬೆಳಗಂಟಿ, ಪಿಡಿಒ ಭಾರತಿ ಬದ್ನೂರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net