

ಕೆ.ಎಂ.ದೊಡ್ಡಿ: ಮದ್ದೂರು ಕ್ಷೇತ್ರ ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕೆಂಬ ದೃಷ್ಟಿಯಿಂದ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.
ಸಮೀಪದ ಯಡಗನಹಳ್ಳಿ ಗ್ರಾಮದ ಶ್ರೀವಿನಾಯಕ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ನಿರ್ಮಾಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಹಲವು ಮಹತ್ತರ ಬದಾಲವಣೆಗಳಾಗಿದ್ದು ಅವುಗಳು ಹಂತ ಹಂತವಾಗಿ ಕಾರ್ಯ ರೂಪಕ್ಕೆ ಬರಲಿವೆ ಎಂದರು.
ಕ್ಷೇತ್ರದಲ್ಲಿನ ಸರ್ಕಾರಿ ಶಾಲಾ ಕಟ್ಟಡಗಳ ಪುನಶ್ಚೇತನಕ್ಕೆ ಕ್ರಮ ವಹಿಸಲಾಗುವುದರ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದರು.
ಗ್ರಾ.ಪಂ. ಮಾಜಿ ಅಧ್ಯಕ್ಷ ಯಡಗನಹಳ್ಳಿ ಕೇಂಚೇಗೌಡ, ಸಂಸ್ಥೆ ಕಾರ್ಯದರ್ಶಿ ಬಿ.ಹನುಮೇಗೌಡ, ನಿರ್ದೇಶಕರಾದ ಕೆ.ಕೆಂಪೇಗೌಡ, ಪುಟ್ಟಸ್ವಾಮಿ, ರವಿಕುಮಾರ್, ಮುಖಂಡ ಕೆ.ಸಿ.ಮಹದೇವು ಮತ್ತಿತರರಿದ್ದರು.