ಶೈಕ್ಷಣಿಕ ಅಭಿವೃದ್ಧಿಗೆ ಕೌಶಲ ಮೈಗೂಡಿಸಿಕೊಳ್ಳಿ

Hadagali Education
ಹೂವಿನಹಡಗಲಿಯ ಸೊಪ್ಪಿನ ಕಾಳಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಿಗೆ ಆಯೋಜಿಸಿದ್ದ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳಿಗೆ ಬಿಇಒ ಮಹೇಶ ಪೂಜಾರ ಶುಕ್ರವಾರ ಚಾಲನೆ ನೀಡಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ, ತಾಲೂಕು ದೈಹಿಕ ಶಿಕ್ಷಣ ಅಧೀಕ್ಷಕ ರಫಿ ಅಹಮದ್, ಎಂ.ಶಿವಲಿಂಗಪ್ಪ, ಯು.ಆನಂದ್, ಎಂ.ಶೇಕ್ ಅಹಮದ್ ಇತರರಿದ್ದರು.
Published on

ಹೂವಿನಹಡಗಲಿ: ಪಠ್ಯೇತರ ಚಟುವಟಿಕೆಗಳಲ್ಲಿ ಶಿಕ್ಷಕರು ಭಾಗವಹಿಸುವುದರಿಂದ ಬೋಧನಾ ಕೌಶಲವೃದ್ಧಿಯಾಗುತ್ತದೆ ಎಂದು ಬಿಇಒ ಮಹೇಶ್ ಪೂಜಾರ ಹೇಳಿದರು.

ಪಟ್ಟಣದ ಸೊಪ್ಪಿನ ಕಾಳಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಕರಿಗೆ ಆಯೋಜಿಸಿದ್ದ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ನಿತ್ಯ ಶಾಲಾ ವಾತಾವರಣದಲ್ಲಿ ಶಿಕ್ಷಕರು ಮಕ್ಕಳೊಂದಿಗೆ ಬೆರೆಯುತ್ತಿರುತ್ತಾರೆ. ಬದಲಾಗುತ್ತಿರುವ ಸಮಾಜದಲ್ಲಿ ಕೌಶಲಗಳನ್ನು ಬಳಸಿಕೊಂಡು ಮಕ್ಕಳ ವಿದ್ಯಾಭ್ಯಾಸವನ್ನು ಹೆಚ್ಚಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಪಠ್ಯದ ಜತೆಗೆ ಪಠೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು. ಪ್ರಬಂಧ, ಸಾಮಾನ್ಯಜ್ಞಾನ, ವಿಜ್ಞಾನ ರಸಪ್ರಶ್ನೆ, ಚಿತ್ರಕಲೆ ಮೊದಲಾದವುಗಳನ್ನು ಶಿಕ್ಷಕರು ಕಲಿತಾಗ ಮಾತ್ರ ಮಕ್ಕಳಿಗೆ ತಿಳಿಸಲು ಸಾಧ್ಯವಾಗುತ್ತದೆ ಎಂದರು. ಶಾಲೆಯ ಉಪ ಪ್ರಾಚಾರ್ಯ ರವೀಂದ್ರನಾಥ ಅಧ್ಯಕ್ಷತೆ ವಹಿಸಿದ್ದರು.

ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ, ತಾಲೂಕು ದೈಹಿಕ ಶಿಕ್ಷಣ ಅಧೀಕ್ಷಕ ರಫಿ ಅಹಮದ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಂ.ಶಿವಲಿಂಗಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಯು.ಆನಂದ್, ಬಡ್ತಿ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಂ.ಶೇಕ್ ಅಹಮದ್, ಕಸಾಪ ತಾಲೂಕು ಅಧ್ಯಕ್ಷ ಟಿ.ಪಿ.ವೀರೇಂದ್ರ, ಸರ್ಕಾರಿ ನೌಕರರ ಸಂಘದ ನೂತನ ನಿರ್ದೇಶಕರಾದ ಜಿ.ಜಗದೀಶ್, ವಿ.ಬಿ.ಜಗದೀಶ್, ಗಡ್ಡಿ ಶಿವಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net